ಕಾಂಗ್ರೆಸ್ ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತೆ – ಪ್ರಹ್ಲಾದ್ ಜೋಶಿ

Public TV
1 Min Read
prahalad joshi

ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಸುಳ್ಳು ಆರೋಪಗಳನ್ನ ಮಾಡುತ್ತಿದೆ. ಕಾಂಗ್ರೆಸ್ ನವರು ಹಣ ಮತ್ತು ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ನಮ್ಮ ದೇಶದಲ್ಲಿ ಹೊರತು ಬೇರೆ ಯಾವುದೇ ದೇಶದಲ್ಲಿ ಕೋವಿಡ್ ವಿಚಾರದಲ್ಲಿ ರಾಜಕಾರಣ ಮಾಡಿಲ್ಲವೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

prahalad joshi 2 medium

ಹುಬ್ಬಳ್ಳಿಯಲ್ಲಿಂದು ಯಂಗ್ ಇಂಡಿಯಾ ಸಂಸ್ಥೆ ಅನುಷ್ಠಾನಕ್ಕೆ ತಂದ ಸ್ವಯಂಚಾಲಿತ ಮಾಸ್ಕ್ ಮಷೀನ್ ಉದ್ಘಾಟನೆ ಮಾಡಿ ಮಾತನಾಡಿದ ಜೋಶಿ ಅವರು, ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ಮತ್ತು ಪಂಜಾಬ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗಿದೆ. ಆದರೂ ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯರ್ಥ ಆರೋಪಗಳನ್ನು ಮಾಡುತ್ತಿದ್ದಾರೆ. ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಎರಡು ವರ್ಷವಾದರೂ ತಮ್ಮ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ನವರು ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಒಬ್ಬ ಅಸಮರ್ಥ ನಾಯಕನಾಗಿದ್ದಾನೆ. ಹೀಗಾಗಿ ಆ ಪಕ್ಷ ಅವನತಿಯತ್ತ ಸಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ :ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

prahalad joshi 3 medium

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ ಆಗಿದೆ. ಯೋಗಿ ಆದಿತ್ಯನಾಥ್ ಅವರು ಒಳ್ಳೆಯ ನಾಯಕ. ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಯೋಗಿ ಆದಿತ್ಯನಾಥ್‍ರನ್ನು ಸರ್ಮಥನೆ ಮಾಡಿಕೊಂಡರು. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಮಟ್ಟದಲ್ಲಿ ಚರ್ಚೆ ಆಗುವುದಿಲ್ಲ. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಯಾವಾಗ ಅವಶ್ಯಕತೆ ಇದೆ ಅವಾಗ ಕೇಂದ್ರದ ನಾಯಕರು ವಿಸ್ತರಣೆ ಮಾಡುತ್ತಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *