ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ವಿಧಿವಶರಾಗಿದ್ದಾರೆ.
ಶಾಸಕರಾಗಿದ್ದ ವೈ.ನಾಗಪ್ಪ ಅವರು ಧರಂಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹರಿಹರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ವೈ.ನಾಗಪ್ಪ ಆಯ್ಕೆಯಾಗಿದ್ದರು. 1989, 1999 ಮತ್ತು 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದ ವೈ.ನಾಗಪ್ಪ ಅವರು ಗೆಲವು ದಾಖಲಿಸಿದ್ದರು. 1985ರ ಚುನಾವಣೆಯಲ್ಲಿ ಸೋತಿದ್ದರು.
Advertisement
ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ! ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ
ಶಾಸಕರಾಗಿದ್ದ ವೈ.ನಾಗಪ್ಪ, ಧರ್ಮಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು.
ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/3VNX9Abagb
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 27, 2020
Advertisement
ವೈ.ನಾಗಪ್ಪ ಅವರ ನಿಧನಕ್ಕೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ ವೈ.ನಾಗಪ್ಪ ಅವರ ಫೋಟೋ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ.ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ವೈ.ನಾಗಪ್ಪ, ಧರಂಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು. ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು.
80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/heJAN6PeiF
— Siddaramaiah (@siddaramaiah) October 27, 2020