ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಗಲಾಟೆ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಈಗಲ್ಲ ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ರೇಸ್ ಇದೆ. ಕಾಂಗ್ರೆಸ್ ದಲಿತ ಪರ ಅಲ್ಪಸಂಖ್ಯಾತರ ಪರ ಅಂತಾರೆ. ಅದು ಬರೀ ವೋಟ್ ಬ್ಯಾಂಕ್. ಯಾವ ದಲಿತರನ್ನ ಸಿಎಂ ಮಾಡಿದ್ದಾರೆ. ಅವರು ಇಲ್ಲಿಯವರೆಗೂ ಯಾರನ್ನ ಉದ್ಧಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಲ್ಲಿ ನರೇಂದ್ರ ಮೋದಿ ಎಲ್ಲಾ ವರ್ಗದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರ ಯಾವುದೇ ಕಾರಣಕ್ಕೂ ನಾಯಕತ್ವದ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ವಿಚಾರದಲ್ಲಿ ಹೆಚ್ಚು ಆಕ್ಟಿವ್ ಆಗಿ ಕೆಲಸ ಮಾಡ್ತಿದ್ದಾರೆ. ಈ ವಾರದಿಂದ ರಾಜ್ಯದ್ಯಂತ ಸಿಎಂ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.
ಪ್ರತಿ ಜಿಲ್ಲೆಗಳಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರೈತರ ಸಮಸ್ಯೆಗಳಿರಬಹುದು ಎಲ್ಲವನ್ನ ಸಿಎಂ ಬಗೆಹರಿಸುತ್ತಾರೆ. ನೀವೂ ನೋಡ್ತೀರಿ ಇನ್ನು ಹೆಚ್ಚು ಆಕ್ಟೀವ್ ಆಗಿ ಕೆಲಸ ಮಾಡ್ತಾರೆ ಎಂದು ಸಿಎಂ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ರಾಜ್ಯಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಾ.ಸುಧಾಕರ್