ಕಾರಣ ಕೊಡದೇ ಯತ್ನಾಳರನ್ನ ಪಕ್ಷದಿಂದ ಉಚ್ಛಾಟಿಸಬೇಕು: ಕೆ.ಎಸ್.ಈಶ್ವರಪ್ಪ

Public TV
2 Min Read
Yatna Eshwarappa

– ಯತ್ನಾಳ್ ಉತ್ತರ ಪೌರುಷನಂತೆ ಮಾತಾಡ್ತಾರೆ
– ಯತ್ನಾಳ್ ಅವರದ್ದು ಮೂರ್ಖತನದ ಹೇಳಿಕೆ

ಕೊಪ್ಪಳ: ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಆ ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಉತ್ತರನ ಪೌರುಷದಂತೆ ಹೊರಗೆ ಬಂದು ಹೇಳಿಕೆ ನೀಡುತ್ತಾರೆ ಎಂದು ಯತ್ನಾಳ್‍ಗೆ ಟಾಂಗ್ ನೀಡಿದರು.

Yatnal bsy

ಯತ್ನಾಳ್ ಹೇಳಿಕೆಯಿಂದ ಕಾಂಗ್ರೆಸ್ ನಾಯಕರಿಗೆ ಸಂತೋಷ ಆಗಿರಬಹುದು. ಸಿದ್ದರಾಮಯ್ಯನವರು ಬಿಜೆಪಿ ಸರ್ಕಾರ ಪತನವಾದ್ರೆ ನಾನು ಕಾರಣ ಅಲ್ಲ ಅಂತ ಹೇಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯನವರೇ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ. ಸ್ವರ್ಗದಲ್ಲಿರುವ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಬಂದರೂ ಬಿಜೆಪಿ ಸರ್ಕಾರ ಬೀಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆ ತಿರುಗೇಟು ನೀಡಿದರು.

Basangouda Patil Yatnal

ಒಬ್ಬ ಯತ್ನಾಳ್ ಹೇಳಿಕೆಯಿಂದ ಯಾವ ಪರಿಣಾಮವೂ ಪಕ್ಷದ ಮೇಲೆ ಬೀರಲ್ಲ. ಪದೇ ಪದೇ ಈ ರೀತಿಯ ಯತ್ನಾಳ್ ಹೇಳಿಕೆಗಳಿಗೆ ಬೆಲೆ ನೀಡಲ್ಲ. ಈ ಕೂಡಲೇ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಚಾಟಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ESHWARAPPA

ಯತ್ನಾಳ್ ಹೇಳಿದ್ದೇನು?: ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ. ಕೇಂದ್ರ ಸರ್ಕಾರದವರಿಗೂ ಸಿಎಂ ಬಿಎಸ್‍ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗುತ್ತಾರೆ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ. ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ಅವರು ನೀಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *