– ಜಿಲ್ಲೆಯ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲು ಆಗಮಿಸಿದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದು ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು.
ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
ಕೆಪಿಸಿ ಹಾಗೂ ಕೈಗಾ ಅಧಿಕಾರಿಗಳ ಜೊತೆ ನೆರೆ ಸಂಬಂಧ ಸಭೆ ನಡೆಸಿ ಮಧ್ಯಾಹ್ನ ಅಂಕೋಲಾ ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.