ನವದೆಹಲಿ: ಲಾಕ್‍ಡೌನ್ ನಡುವೆ ಪ್ರವಾಸಿ ಕಾರ್ಮಿಕರ ಸಂಕಷ್ಟ ಬಗೆಹರಿಸುವ ಕಾರ್ಯದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಆರೋಪಿಸಿದ್ದಾರೆ.
ಪ್ರವಾಸಿ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಕಾರ್ಮಿಕರ ನೆರವಿಗೆ ನಿಂತಿದೆ. ಆದರೆ ರಾಜ್ಯ ಸರ್ಕಾರಗಳಿಂದ ಸೂಕ್ತ ಪ್ರತಿಕ್ರಿಯೆ ಬರುತ್ತಿಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ನಾವು 105 ರೈಲುಗಳನ್ನು ಬಿಡಲು ಸಿದ್ಧವಿದ್ದೇವೆ. ಆದರೆ ಮಮತಾ ಬ್ಯಾನರ್ಜಿಯವರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು. ಮಹಾರಾಷ್ಟ್ರ, ಜಾರ್ಖಂಡ್, ಪಂಜಾಬ್, ಛತ್ತೀಸ್‍ಗಢನಂತಹ ರಾಜ್ಯಗಳು ಕೂಡ ಸರಿಯಾಗಿ ಸಮನ್ವಯ ಸಾಧಿಸುತ್ತಿಲ್ಲ ಎಂದು ಜಾವೇಡ್ಕರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿಲ್ಲ ಎನ್ನುವ ದುಃಖವಿದೆ. ಅದು ಮೋದಿ ಸರ್ಕಾರವನ್ನು ನಂಬುವುದಿಲ್ಲ, ಹೀಗಾಗಿ ಆರೋಪ ಮಾಡುತ್ತಾರೆ. ಪರಿಹಾರ ಕಾರ್ಯಗಳು ರಾಜ್ಯ ಸರ್ಕಾರದ ನೆಲಗಳ ಮೇಲೆ ಮಾಡಬೇಕಾದ ಕಾರಣ ಹೆಚ್ಚು ಕೇಂದ್ರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಇಲ್ಲಿ ಸಮನ್ವಯ ಮುಖ್ಯ ಎಂದರು.
ಜನರು ಈಗ ವೈರಸ್‍ನೊಂದಿಗೆ ಬದುಕಲು ಪ್ರಾರಂಭಿಸಬೇಕು. ಅವರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆರ್ಥಿಕ ಚಟುವಟಿಕೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿ ಎಂದು ನಾನು ಆಶಿಸುತ್ತೇನೆ. ಕೆಂಪು ವಲಯಗಳಲ್ಲಿ ಕೆಲವು ನಿರ್ಬಂಧಗಳಿವೆ. ಆದರೆ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಚಟುವಟಿಕೆಗಳು ಪ್ರಾರಂಭವಾಗಿವೆ. ಆತ್ಮನಿರ್ಭಾರ ಭಾರತ್ ಮಹಾತ್ಮ ಗಾಂಧಿಯವರ ವಿಚಾರಗಳಿಗೆ ಅನುಗುಣವಾಗಿದೆ. ಆದರೆ ಸ್ವಾವಲಂಬಿಗಳಾಗುವುದಿಲ್ಲ, ಪ್ರಪಂಚದೊಂದಿಗೆ ಸಂಬಂಧವನ್ನು ಕಡಿತಗೊಳಿಸುವುದು ಎಂದರ್ಥವಲ್ಲ ಎಂದು ಹೇಳಿದರು.