ಮಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ನೀಡುವ ಆಹಾರದ ಕಿಟ್‍ನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಡೊಂಗರಕೇರಿ ಭುವನೇಂದ್ರ ಸಭಾಂಗಣದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ. ಇದನ್ನು ಅರಿತು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರೂ ಕೂಡ ಕಾರ್ಡಿಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದರು. ಇದನ್ನೂ ಓದಿ: ಬೇವು ತಲೆಹೊಟ್ಟಿಗೆ ಮದ್ದು
Advertisement
Advertisement
ಸರಕಾರ ನೀಡುವ ಸವಲತ್ತುಗಳು ನೇರವಾಗಿ ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಚಿಂತನೆಯೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ – ಮಹಿಳೆಯ ವಿರುದ್ಧ ಯಜಮಾನ ದೂರು
Advertisement
ಈ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ರೂಪ ಶ್ರೀ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಕಾರ್ಮಿಕ ಅಧಿಕಾರಿ ವಿಲ್ಮಾ, ಮೇರಿ ಡಯಾಸ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಜ್ಯೂನಿಯರ್ ಚಿರುವಿನ ಹೊಸ ಫೋಟೋಗಳು ವೈರಲ್
Advertisement