– ವಿಡಿಯೋದಲ್ಲಿ ಲೈಂಗಿಕ ಕ್ರಿಯೆಗೆ ಬಲವಂತ
ಮುಂಬೈ: ಅಪರಿಚಿತ ವ್ಯಕ್ತಿಯೊಬ್ಬ ಬೇರೆಯವರ ಪತ್ನಿಗೆ ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗವನ್ನು ತೋರಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ವಾಲುಜ್ ಗ್ರಾಮದ ನಿವಾಸಿ ಅಪರಿಚಿತ ವ್ಯಕ್ತಿಯೊಬ್ಬ ನನ್ನ ಪತ್ನಿಗೆ ವಿಡಿಯೋ ಮಾಡಿ ತನ್ನ ಖಾಸಗಿ ಅಂಗವನ್ನು ತೋರಿಸಿದ್ದಾನೆ. ಅಷ್ಟೇ ಅಲ್ಲದೇ ನನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಬಲವಂತ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.
ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಎಂಐಡಿಸಿ ವಾಲುಜ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ದೂರುದಾರರ ಪತ್ನಿಗೆ ಅಪರಿಚಿತ ವ್ಯಕ್ತಿ ಹಲವಾರು ಬಾರಿ ಫೋನ್ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಮಹಿಳೆ ಈ ಬಗ್ಗೆ ನಿರ್ಲಕ್ಷಿಸಿದ್ದಾರೆ. ಆದರೆ ಫೋನ್ ಕರೆಗಳು ಹೆಚ್ಚಾಗಿ ಬರುತ್ತಿದ್ದವು. ಒಂದು ದಿನ ವಿಡಿಯೋ ಕಾಲ್ ಮಾಡಿದ್ದಾನೆ. ಮಹಿಳೆ ಕಾಲ್ ರಿಸೀವ್ ಮಾಡುತ್ತಿದ್ದಂತೆ ತನ್ನ ಖಾಸಗಿ ಅಂಗವನ್ನು ತೋರಿಸಿದ್ದಾನೆ ಎಂದು ಸಬ್ ಇನ್ಸ್ ಪೆಕ್ಟರ್ ಸತೀಶ್ ಪಂಡಿತ್ ಹೇಳಿದ್ದಾರೆ.
ಅಪರಿಚಿತ ವ್ಯಕ್ತಿಯ ನಡತೆಯಿಂದ ಗಾಬರಿಯಾದ ಮಹಿಳೆ ಈ ಬಗ್ಗೆ ಪತಿಗೆ ತಿಳಿಸಿದ್ದಾರೆ. ನಂತರ ಪತಿ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಈಗಾಗಲೇ ಪೊಲೀಸರು ಅಪರಿಚಿತ ವ್ಯಕ್ತಿಯ ಮೊಬೈಲ್ ನಂಬರನ್ನ ಸಂಗ್ರಹಿಸಿದ್ದು, ಶಂಕಿತನನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಂಡಿತ್ ಹೇಳಿದ್ದಾರೆ.