– ಗಡಿಯಲ್ಲಿ ಕ್ಯಾತೆ ತೆಗೆದ ಕೋತಿ ಪಾಕ್
– ಇಬ್ಬರು ಯೋಧರಿಗೆ ಗಾಯ
ಶ್ರೀನಗರ: ಜಮ್ಮು-ಕಾಶ್ಮೀರದ ಬಟಮಾಲೂನಲ್ಲಿ ಇಂದು ನಡೆದಿರುವ ಎನ್‍ಕೌಂಟರ್ ಅಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.
ಇಂದು ಮುಂಜಾನೆ 2.30ರ ಸುಮಾರಿಗೆ ಬಟಮಾಲೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಬಟಮಾಲೂನ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ಕಾರ್ಯಚರಣೆ ಇನ್ನೂ ನಡೆಯುತ್ತಿದೆ.
Advertisement
Advertisement
ಈ ವೇಳೆ ಭಾರತೀಯ ಸೈನಿಕರು ಭಯೋತ್ಪಾದಕರ ಅಡಗು ತಾಣದ ಬಳಿ ಹೋಗುತ್ತಿದಂತೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಎನ್‍ಕೌಂಟರ್ ಅಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಕಾರ್ಯಚರಣೆ ವೇಳೆ ಓರ್ವ ಮಹಿಳೆ ಕೂಡ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಯೋಧರಿಗೆ ಗಾಯಗೊಂಡಿದ್ದು, ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Jammu and Kashmir: Three terrorists neutralised in encounter with security forces in Batamaloo area of Srinagar
(visuals deferred by unspecified time) pic.twitter.com/1vo56F3Luh
— ANI (@ANI) September 17, 2020
Advertisement
ನಿನ್ನೆ ಕೂಡ ಪುಲ್ವಾಮದಲ್ಲಿ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸೆಪ್ಟೆಂಬರ್ 4ರಂದು ಬಾರಾಮುಲ್ಲಾ ಜಿಲ್ಲೆಯ ಯೆಡಿಪೋರಾ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಕೊಂದು ಹಾಕಿದ್ದವು. ಜೊತೆಗೆ ಭಯೋತ್ಪಾದಕರಿಂದ ಎರಡು ಎಕೆ-47 ರೈಫಲ್‍ಗಳು, ಎರಡು ಬುಲೆಟ್ ಜ್ಯಾಕೆಟ್ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.
ಜಮ್ಮು-ಕಾಸ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಬಳಿ ಪಾಕಿಸ್ತಾನ ಇಂದು ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ. ಈ ರೀತಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಉಗ್ರರು ಭಾರತದ ಒಳಗೆ ನುಸುಳಲು ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. 2014ರಿಂದ ಪಾಕಿಸ್ತಾನ ಮಾಡಿದ ದಾಳಿಗೆ ಭಾರತೀಯ ಸೇನೆಯ 75 ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.