ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

Public TV
2 Min Read
DINESH 1

– ಮಾಹಿತಿ ನೀಡಿದ್ದರವನ್ನೇ ಟಾರ್ಗೆಟ್

ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಡೀಲ್ ಆರೋಪದ ಹೇಳಿಕೆ ಬೇಸರ ತಂದಿದೆ. ದೂರು ನೀಡಿದ್ದವರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ದಿನೇಶ್ ಆರೋಪಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ಬರೆದ ಪತ್ರ ಸಹ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

DINESH 3

ದೂರು ಹಿಂಪಡೆಯುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದೇನೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನಮ್ಮ ವಕೀಲರು ಹೋಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೂರುದಾರ 5 ಕೋಟಿ ತೆಗೆದುಕೊಂಡು ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯಿಂದ ಜನರು ನನ್ನನ್ನು ಸಂಶಯದಿಂದ ನೋಡುತ್ತಿದ್ದಾರೆ. ಈ ಆರೋಪ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ ಅಂತ ನಾನು ಅರ್ಥೈಸಿಕೊಂಡಿದ್ದೇನೆ. ಮಾಹಿತಿ ನೀಡುವವರನ್ನ ಟಾರ್ಗೆಟ್ ಮಾಡೋದು ಬಹಳ ನೋವಿನ ಸಂಗತಿ ಎಂದು ಬೇಸರ ಹೊರ ಹಾಕಿದರು.

DINESH

ದಿನೇಶ್ ಪತ್ರ: ಮಾಜಿ ನೀರಾವರಿ ಮಂತ್ರಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನಿಡಿದ್ದು ಸರಿಯಷ್ಟೇ. ಬಟ್ಟೆಯ ಮೇಲೆ ಮುಳ್ಳು ಬಿದ್ದರೂ ಮುಳ್ಳಿನ ಮೇಲೆ ಬಟ್ಟೆ ಬಿದ್ದರೂ ಹರಿಯುವುದು ಬಟ್ಟೆಯ ಎಂಬ ನಾಣ್ಣುಡಿಯನ್ನು ಈ ಹಿಂದೆ ಮಹಿಳೆಯರ ವಿಷಯದಲ್ಲಿ ಬಳಕೆ ಮಾಡಲಾಗುತ್ತಿತ್ತು. ದುರಾದೃಷ್ಟವಶಾತ್ ಈಗಿನ ಸುಸಂಸ್ಕೃತ ನಾಗರಿಕ ಸಮಾಜದಲ್ಲಿ ಮಹಿಳೆಯರ ವಿಚಾರದಲ್ಲಿ ಈ ನಾಣ್ಣುಡಿಯಂತೆ ನಡೆಯುತ್ತಿದೆ. ಸಚಿವರದ್ದೆನ್ನಲಾದ ಲೈಂಗಿಕ ದೌರ್ಜನ್ಯ ಸಿಡಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ಒಪ್ಪಿಸಿದ್ದೆ. ಆದರೆ ಈಗ ಇಡೀ ಸಮಾಜದಲ್ಲಿ ಮಹಿಳೆಯ ಚಾರಿತ್ಯ ಹರಣ ನಡೆಯುತ್ತಿದೆ.

DINESH 2

ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ಮಾಜಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ದಿನೇಶ್ ಕಲd5552168 69c8 4178 8097 65044bcc1527್ಲಹಳ್ಳಿ, ಇನ್ನೂ ಮೂವರ ವೀಡಿಯೋಗಳು ತಮ್ಮ ಬಳಿಯಲ್ಲಿರುವ ಬಗ್ಗೆ ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *