Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕುಶಲಕರ್ಮಿಗಳ ಉದ್ಯೋಗಕ್ಕಾಗಿ ‘ಕುಶಲ ಕೋಶ’ ಆ್ಯಪ್

Public TV
Last updated: June 21, 2021 5:42 pm
Public TV
Share
2 Min Read
klr narayan gowda
SHARE

ಬೆಂಗಳೂರು: ಜನಸಾಮಾನ್ಯರ ತುರ್ತು ಅಗತ್ಯ ಸೇವೆಗಳನ್ನು ಪಡೆಯಲು ಹಾಗೂ ಕುಶಲಕರ್ಮಿಗಳಿಗೆ ಉತ್ತಮ ಉದ್ಯೋಗಾವಕಾಶ ಒದಗಿಸಲು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ‘ಕುಶಲ ಕೋಶ’ ಮೊಬೈಲ್ ಅಪ್ಲೀಕೇಶನ್ ಅನ್ನು ತಯಾರಿಸಿದ್ದು, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲೋಕಾರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಕುಶಲ ಕೋಶ’ ಮೊಬೈಲ್ ಆಪ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಬಹಳ ಅನುಕೂಲವಾಗುವಂತಹ ಅಪ್ಲಿಕೇಶನ್ ಇದಾಗಿದೆ. ಜನರು ತಮಗೆ ಅಗತ್ಯವಿರುವ ಕಾರ್ಯಕ್ಕೆ ಸುಲಭದಲ್ಲಿ ಕೌಶಲ್ಯಯುತ ವ್ಯಕ್ತಿಗಳನ್ನು ಪತ್ತೆ ಹಚ್ಚಬಹುದು. ಜೊತೆಗೆ ಬೇರೆ ಬೇರೆ ಉದ್ಯೋಗದಲ್ಲಿ ಕೌಶಲ್ಯ ಹೊಂದಿರುವವರು ತಮ್ಮ ವಿವರವನ್ನು ಅಪ್ಲಿಕೇಶನ್‍ನಲ್ಲಿ ನೊಂದಾಯಿಸಿ, ಉದ್ಯೋಗವನ್ನೂ ಪಡೆದುಕೊಳ್ಳಬಹುದು. ‘ಕುಶಲಕೋಶ ಎಂಬ ಈ ಅಪ್ಲಿಕೇಶನ್ ನ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.

”ಕುಶಲ ಕೋಶ” ಈ ದ್ವಿಭಾಷಾ ಮೊಬೈಲ್ ಅಪ್ಲಿಕೇಷನ್ ಅನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಕೆಎಸ್‍ಆರ್ ಎಸ್‍ಎಸಿ) ಹಾಗೂ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಪ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ.

ಯೋಗ ಶಿಕ್ಷಕರಿಗಾಗಿ ಆನ್‍ಲೈನ್ ಅಪ್ಲಿಕೇಷನ್ ಅನ್ನು ತಯಾರಿಸಲಾಗಿದೆ. ಇದರಿಂದ ನಾಗರೀಕರು ತಮ್ಮ ಹತ್ತಿರದ ಯೋಗ ಶಿಕ್ಷಕರು ಯಾರು ಎಂಬ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ. ಗೂಗಲ್ ಪ್ಲೇಸ್ಟೋರ್ ನಿಂದ ಕುಶಲಕೋಶ ಮೊಬೈಲ್ ಆಪ್ ಅನ್ನು ಡೌನ್‍ಲೋಡ್ ಮಾಡಿ, ಆನ್‍ಲೈನ್ ಮೂಲಕ ಯೋಗ ಶಿಕ್ಷಕರಿಂದ ಯೋಗಾಭ್ಯಾಸ ಮಾಡಬಹುದಾಗಿದೆ. ಈ ಮೊಬೈಲ್ ಆಪ್‍ನ ಮೂಲಕ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಯೋಗ ಶಿಕ್ಷಕರು ತಮ್ಮ ವಿವರಗಳನ್ನು ಅಪ್‍ಲೋಡ್ ಮಾಡಿ, ಹೆಚ್ಚಿನ ಜನರಿಗೆ ತಮ್ಮ ಕಲಿಕೆಯನ್ನು ವಿಸ್ತರಣೆ ಮಾಡಲು ಈ ಅಪ್ಲಿಕೇಷನ್ ಅನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಯೋಗ ಶಿಕ್ಷಕರು ಈ ಅಪ್ಲಿಕೇಶನ್ ನಲ್ಲಿ ನೋಂದಣಿ ಮಾಡಿರುವ ವಿಳಾಸವನ್ನು ನಕ್ಷೆಯೊಂದಿಗೆ ಇದು ತೋರಿಸಲಿದೆ. ಈ ಅಪ್ಲಿಕೇಶನ್‍ನಲ್ಲಿ ಕರ್ನಾಟಕ ನಕ್ಷೆಯ ಮೇಲೆ ಕ್ಲಿಕ್ ಮಾಡಿದಾಕ್ಷಣ ನಿಮ್ಮ ಸುತ್ತಮುತ್ತಲಿನಲ್ಲಿ ಇರುವ 5 ಯೋಗ ಬೋಧಕರ ವಿಳಾಸವನ್ನು ಪತ್ತೆ ಹಚ್ಚುತ್ತದೆ.

ಕೇವಲ ಯೋಗ ಶಿಕ್ಷಕರಿಗೆ ಸಹಾಯವಾಗುವುದು ಮಾತ್ರವಲ್ಲ, ಎಲೆಕ್ಟ್ರಿಷಿಯನ್, ಪ್ಲಂಬರ್, ಜಿಮ್ ತರಬೇತುದಾರರು, ಪೇಂಟರ್, ಡ್ರೈ ಕ್ಲೀನರ್, ಕಾರ್ಪೆಂಟರ್ ಸೇರಿದಂತೆ ಇತರೆ ವರ್ಗಗಳ ನುರಿತ ವ್ಯಕ್ತಿಗಳನ್ನು ಪತ್ತೆಹಚ್ಚಲು ಸಹಾಯವಾಗುವಂತೆಯೂ ಈ ಅಪ್ಲಿಕೇಶನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಕೌಶಲ್ಯ ಹೊಂದಿರುವ ಸಿಬ್ಬಂದಿ ಈ ಅಪ್ಲಿಕೇಶನ್‍ನಲ್ಲಿ ತಮ್ಮ ವಿಳಾಸ ಹಾಗೂ ವಿವರಗಳನ್ನು ನೋಂದಣಿ ಮಾಡಿಕೊಳ್ಳಬಹುದು. ಅಲ್ಲದೆ ವಿಳಾಸ ಮತ್ತು ಸಂಪರ್ಕ ವಿವರಗಳ ಹೊರತಾಗಿ, ಯೂಟ್ಯೂಬ್ ಲಿಂಕ್, ವಾಟ್ಸಾಪ್ ಸಂಖ್ಯೆ, ಫೇಸ್‍ಬುಕ್ ಪುಟವನ್ನು ಸಹ ನೋಂದಾಯಿಸಬಹುದು.

TAGGED:bengaluruKushala Kosha Appnarayana gowdaPublic TVಕುಶಲ ಕೋಶ ಆ್ಯಪ್ಕುಶಲಕರ್ಮಿನಾರಾಯಣಗೌಡಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Sudeep 1
ಅಮ್ಮನ ಹೆಸರಿನಲ್ಲಿ ಸುದೀಪ್ ಹಸಿರು ಕ್ರಾಂತಿ
Cinema Latest Sandalwood
Vishnu memorial
ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ
Cinema Latest Sandalwood Top Stories
SUDEEP
ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!
Cinema Latest Sandalwood Top Stories
Mangalapuram‌ movie
ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ
Cinema Latest Sandalwood Top Stories
Landlord Cinema
ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್
Cinema Latest Sandalwood

You Might Also Like

Siddaramaiah 7
Bengaluru City

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿದ್ದರಾಮಯ್ಯ

Public TV
By Public TV
7 minutes ago
Bagu Khan
Latest

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ

Public TV
By Public TV
11 minutes ago
White and Yellow India Travel Vlog YouTube Thumbnail
Latest

ಪಾಕ್‌ ಹುಟ್ಟಡಗಿಸಲು ಐಎಎಫ್‌ ಬಳಸಿದ್ದು 50ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರ: ವಾಯುಪಡೆಯ ಉಪಮುಖ್ಯಸ್ಥ ಮಾಹಿತಿ

Public TV
By Public TV
18 minutes ago
Modi to china
Latest

7 ವರ್ಷಗಳ ನಂತರ ಚೀನಾಗೆ ಪ್ರಧಾನಿ ಮೋದಿ ಭೇಟಿ

Public TV
By Public TV
35 minutes ago
tejaswi yadav
Latest

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

Public TV
By Public TV
1 hour ago
Rajnath Singh
Latest

ಇನ್ಮುಂದೆ ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ: ರಾಜನಾಥ್ ಸಿಂಗ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?