ಕುಸ್ತಿಪಟು ಸುಶೀಲ್ ಕುಮಾರ್​ಗೆ 14 ದಿನ ನ್ಯಾಯಾಂಗ ಬಂಧನ

Public TV
1 Min Read
sushil kumar

ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಬಂಧನವಾಗಿರುವ ಕುಸ್ತಿಪಟು ಸುಶೀಲ್ ಕುಮಾರ್​ಗೆ 14ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

sushil kumar 1

ದೆಹಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲು ಸುಶೀಲ್ ಕುಮಾರ್ ಅವರನ್ನು 4 ದಿನ ಪೊಲೀಸ್ ಕಸ್ಟಡಿ ನೀಡಬೇಕೆಂದು ಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಸುಶೀಲ್ ಕುಮಾರ್ ಬಂಧನ

ಏನಿದು ಪ್ರಕರಣ
ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಬಳಿಕ ಸುಶೀಲ್ ಹಾಗೂ ಸಾಗರ್ ರಾಣಾ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದರು ಎಂದು ವರದಿಯಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ತೀವ್ರ ಪ್ರಯತ್ನ ನಡೆಸುತ್ತಿದ್ದರು. ನಂತರ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಪೊಲೀಸರು ಸುಶೀಲ್ ಕುಮಾರ್ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ, ಆತನ ಸಹಚರ ಅಜಯ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ ಬಹುಮಾನ ಕೂಡ ಘೋಷಿಸಿದ್ದರು.

ಇದಾದ ಬಳಿಕ ಮೇ 18ರಂದು ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ವಜಾಗೊಳಿಸಿತ್ತು. ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಸುಶೀಲ್ ಕುಮಾರ್ ಮತ್ತು ಅವರ ಸ್ನೇಹಿತನನ್ನು ಮೇ 23ರಂದು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದರು. ಇದನ್ನೂ ಓದಿ: ಸುಶೀಲ್ ಕುಮಾರ್​ಗೆ ಶಾಕ್‍ಕೊಟ್ಟ ರೈಲ್ವೇ ಇಲಾಖೆ

ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು ಮತ್ತು 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜಯಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *