ಕಲಬುರಗಿ: ಜೇವರ್ಗಿ ಕೃಷಿ ಇಲಾಖೆ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ಪತ್ತೆಯಾಗಿದೆ.
ಸುನಿಲ್ ಕುಮಾರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುನಿಲ್ ಕುಮಾರ್ ಜೇವರ್ಗಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾನೆ. ಕಲಬುರಗಿ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದ್ದು, ಅಧಿಕಾರಿ ಮನೆಯಲ್ಲಿ 9 ಲಕ್ಷ ರೂಪಾಯಿ ನಗದು ಹಣ ಮತ್ತು ಚಿನ್ನಾಭರಣ ಪತ್ತೆಯಾಗಿದೆ.
ಕೃಷಿ ಅಧಿಕಾರಿ ಸುನಿಲ್ ಕುಮಾರ್ ಮಂಗಳವಾರ 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಹೀಗಾಗಿ ಕಲಬುರಗಿಯಲ್ಲಿನ ಆತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಮನೆಯಲ್ಲಿ ತಪಾಸಣೆ ಮಾಡುವ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ಆಸ್ತಿಯ ದಾಖಲೆ ಪತ್ತೆಯಾಗಿದೆ. ಎಸಿಬಿ ಎಸ್.ಪಿ.ಮಹೇಶ್ ಮೇಘಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದೆ.