ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜ್ಯ ಸರ್ಕಾರದರ ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.
ಯಾವುದೇ ಗೌರವ ಧನ, ಸಂಭಾವನೆ ಪಡೆಯದೆ ಚಾಲೆಂಜಿಂಗ್ ಸ್ಟಾರ್ ರೈತರ ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಡಿ ಫ್ಯಾನ್ಸ್ ಅಭಿಮಾನಿಗಳಲ್ಲಿ ಈ ವಿಚಾರ ತಿಳಿದು ಸಂತಸ ಮನೆಮಾಡಿದೆ.
Advertisement
ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ, ರಾಜ್ಯದ ಅನ್ನದಾತರ ಏಳಿಗೆಗೆ ಕೈಜೋಡಿಸುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ @dasadarshan ಅವರಿಗೆ ಹೃತ್ಪೂರ್ವಕ ಧನ್ಯವಾದಗಳು.@DDChandanaNews | @BSYBJP | @KarnatakaVarthe | @BJP4Karnataka | @CMofKarnataka
1/ pic.twitter.com/DWSzH3vXBk
— Kourava B.C.Patil (@bcpatilkourava) January 25, 2021
Advertisement
ಎರಡು ವರ್ಷಗಳ ಹಿಂದೆ ಅರಣ್ಯ ಇಲಾಖೆಯ ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಿಸುವ ಸಂದೇಶ ಸಾರುವ ರಾಯಭಾರಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ಕಾಡಿದ್ದರೆ ನಾಡು ವನವಿದ್ದರೆ ಜೀವನ ಎಂದು ಸಾರಿದ್ದರು. ಇದೀಗ ನೇಗಿಲಯೋಗಿ ಪರ ನಿಂತು ಪ್ರೋತ್ಸಾಹ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ.
Advertisement
Advertisement
ಸಿನಿಮಾಗಳಿಂದ ಮಾತ್ರವಲ್ಲದೆ ಹಲವು ಒಳ್ಳೆ ಕಾರ್ಯಗಳಿಂದ ದರ್ಶನ್ ಸುದ್ದಿಯಾಗುತ್ತಿರುತ್ತಾರೆ. ಇದೀಗ ಅನ್ನದಾತನ ರಾಯಭಾರಿಯಾಗಿ ನಿಂತಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಅಭಿಮಾನಿಗಳು, ನೆಟ್ಟಿಗರು ಮೆಚ್ಚಿ ಉತ್ತಮ ಪ್ರಶಂಸೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.
ರಾಜ್ಯದ ಕೃಷಿ ಇಲಾಖೆಯಲ್ಲಿ ಹಲವಾರು ಮಹತ್ತರ ಬದಲಾವಣೆ ಹಾಗೂ ನಾಡಿನ ಯುವ ಜನತೆಗೆ “ವೀಕೆಂಡ್ ಅಗ್ರಿಕಲ್ಚರ್ ಸಂಸ್ಕೃತಿ” ಪರಿಚಯಿಸುವ ನಮ್ಮ ಪ್ರಯತ್ನಕ್ಕೆ ಮುಕ್ತ ಮನಸ್ಸಿನಿಂದ ಕೈ ಜೋಡಿಸಿರುವ ದರ್ಶನ ಅವರಿಗೆ ನಾನು ಆಭಾರಿಯಾಗಿದ್ದೇನೆ.
ನಾವೆಲ್ಲರೂ ಸೇರಿ ರಾಜ್ಯದ ಅನ್ನದಾತರ ಋಣ ತೀರಿಸುವ ಕಾರ್ಯ ಮಾಡೋಣ.
ಅನ್ನದಾತೋ ಸುಖೀಭವ! ಜೈ ಕಿಸಾನ್!
3/
— Kourava B.C.Patil (@bcpatilkourava) January 25, 2021
ರಾಜ್ಯದ ಕೃಷಿ ಇಲಾಖೆಯಲ್ಲಿ ಹಲವಾರು ಮಹತ್ತರ ಬದಲಾವಣೆ ಹಾಗೂ ನಾಡಿನ ಯುವ ಜನತೆಗೆ “ವೀಕೆಂಡ್ ಅಗ್ರಿಕಲ್ಚರ್ ಸಂಸ್ಕøತಿ” ಪರಿಚಯಿಸುವ ನಮ್ಮ ಪ್ರಯತ್ನಕ್ಕೆ ಮುಕ್ತ ಮನಸ್ಸಿನಿಂದ ಕೈ ಜೋಡಿಸಿರುವ ದರ್ಶನ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಚಿತ್ರರಂಗದ ವೃತ್ತಿ ಬದುಕಿನ ಜೊತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವ ದರ್ಶನ್ ಅವರು ನಾಡಿನ ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ. ಅಲ್ಲದೇ, ಅವರ ಪರಿಸರ ಪ್ರಜ್ಞೆ, ಪ್ರಾಣಿ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳೆಡಗಿನ ಒಲವು ಇಂದಿನ ಯುವ ಕೃಷಿಕರಿಗೆ ಮಾದರಿಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.