ನವದೆಹಲಿ: ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನು ಹಿಂಪಡೆದ ದಿನ ರೈತರು ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಾರೆ ಎಂದು ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
Advertisement
ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ
Advertisement
Advertisement
ಈ ಆಂದೋಲನದಲ್ಲಿ ದೇಶದ ರೈತರು ಒಗ್ಗಟ್ಟಾಗಿದ್ದಾರೆ. ಔಷಧಿಗಳ ರೀತಿಯಲ್ಲಿ ಆಹಾರವನ್ನ ಕಾಳಸಂತೆಗೆ ತಲುಪಲು ಬಿಡಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ರಾಜ್ಯದಲ್ಲಿ ಆಂದೋಲದಲ್ಲಿ ಭಾಗಿಯಾದ ರೈತರ ವಿರುದ್ಧ ಪ್ರಕರಣ ದಾಖಲಿಸೋದು, ತನಿಖೆ ನಡೆಸುವ ಪ್ರಕ್ರಿಯೆ ಆರಂಭವಾದ್ರೆ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲೀಸರನ್ನು ಅಟ್ಟಾಡಿಸಿದ ಉದ್ರಿಕ್ತರು – 10 ಅಡಿ ಆಳದ ಕೋಟೆಯಿಂದ ಜಿಗಿದು ಬಚಾವ್
Advertisement
बिल वापसी नहीं, तो घर वापसी नहीं ।#FarmersProtest #जीतेगा_किसान
— Rakesh Tikait (@RakeshTikaitBKU) May 30, 2021
ಮೂರು ಕೃಷಿ ಕಾನೂನುಗಳ ಹಿಂಪಡೆಯುವರೆಗೂ ಆಂದೋಲನ ನಡೆಯಲಿದೆ. ಹಾಗಾಗಿ ರೈತರು ಸಿದ್ಧರಾಗಿರಬೇಕಿದೆ. ಯಾವುದೇ ಕಾರಣಗಳಿಗೂ ಆಂದೋಲನ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಕೊರೊನಾ ಕಷ್ಟ ಕಾಲದಲ್ಲಿ ಕಪ್ಪು ಕಾನೂನುಗಳ ಜಾರಿಗೆ ತರಬಹುದು. ಆದ್ರೆ ರದ್ದು ಪಡಿಸಲು ಆಗುವದಿಲ್ಲವೇ ಎಂದು ರಾಕೇಶ್ ಟಿಕಾಯತ್ ಪ್ರಶ್ನಿಸಿದರು. ಇದನ್ನೂ ಓದಿ: ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ: ರಾಕೇಶ್ ಟಿಕಾಯತ್
देशभर में आंदोलित किसानों पर कहीं भी किसी भी किसान पर, मुकदमे दर्ज किए गए तो आंदोलन को दी जाएगी देशव्यापी धार.!
— Rakesh Tikait (@RakeshTikaitBKU) May 30, 2021