ಚಿಕ್ಕೋಡಿ: ಹಾಸಿಗೆ ತೊಳೆಯಲು ಹೋಗಿ ಕೃಷ್ಣಾ ನದಿಯಲ್ಲಿ ನೀರು ಪಾಲಾಗಿದ್ದ ನಾಲ್ವರು ಸಹೋದರರ ಶವಗಳನ್ನು ಎನ್‍ಡಿಆರ್‍ಎಫ್ ತಂಡ ಹಾಗೂ ಸ್ಥಳೀಯರು ಪತ್ತೆ ಹಚ್ಚಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿ ನಾಲ್ಕು ಜನ ಸಹೋದರರು ನೀರು ಪಾಲಾಗಿದ್ದರು. ಇದೀಗ ನಾಲ್ವರ ಮೃತದೇಹವು ಪತ್ತೆಯಾಗಿದೆ. ನಿನ್ನೆ ಒಬ್ಬ ಹಾಗೂ ಇಂದು ಮೂವರ ಶವಗಳನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ಹಾಗೂ ಸ್ಥಳೀಯರು ನೀರಿನಲ್ಲಿ ಕಾರ್ಯಚರಣೆ ನಡೆಸಿ ಪತ್ತೆಹಚ್ಚಿ ಹೊರತೆಗೆದಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿ ಪಾಲು
Advertisement
Advertisement
ನಿನ್ನೆ ಪರಶುರಾಮ ಬನಸೊಡೆ ಎಂಬವರ ಶವ ಪತ್ತೆಯಾಗಿತ್ತು. ಬಳಿಕ ಇಂದು ಸಹೋದರರಾದ ಶಂಕರ್, ಸದಾಶಿವ, ಹಾಗೂ ಧರೆಪ್ಪರವರ ಶವ ಹೊರಕ್ಕೆ ತೆಗೆಯಲಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಸಹೋದರರಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಮೂರು ದಿನಗಳ ಹಿಂದೆ ಹಾಸಿಗೆ ತೊಳೆಯಲು ಕೃಷ್ಣಾ ನದಿಗೆ ಹೋಗಿದ್ದಾಗ ಅಚಾನಕ್ಕಾಗಿ ಒಬ್ಬರನ್ನು ಕಾಪಾಡಲು ಹೋಗಿ ಮತ್ತೊಬ್ಬರಂತೆ ನಾಲ್ವರು ಸಹೋದರರು ನದಿ ನೀರು ಪಾಲಾಗಿದ್ದರು. ಇವರ ಶವ ಹೊರತೆಗೆಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement