ಮಂಡ್ಯ: ಕೆಆರ್‌ಎಸ್ ಜಲಾಶಯ ಭರ್ತಿಗೂ ಮುನ್ನ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಸೇತುವೆ ಕೆಳ ಭಾಗ ನಿಂತು ಮಂಡ್ಯ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೆಆರ್‌ಎಸ್ ಜಲಾಶಯ ಭರ್ತಿಯಾಗುವ ಮೊದಲೇ ಅಧಿಕಾರಿಗಳು ತಮಿಳುನಾಡಿಗೆ ಐದು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿಸುತ್ತಿರುವುದು ಖಂಡನೀಯ. ಈಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ ಬರುವ ಒಳಹರಿವು ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ನೀರು ಹರಿಸಬಾರದು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೆಆರ್‌ಎಸ್ ಭರ್ತಿಗೂ ಮುನ್ನ ತಮಿಳುನಾಡಿಗೆ ನೀರು – ರೈತರಿಂದ ಆಕ್ರೋಶ
Advertisement
Advertisement
ಅಧಿಕಾರಿಗಳು ನಿನ್ನೆಯಿಂದ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಈ ಭಾಗದ ಜನರಿಗೆ ಹಾಗೂ ರೈತರಿಗೆ ಮಾಡುವ ದ್ರೋಹವಾಗಿದೆ. ಈ ಕೂಡಲೇ ಅಧಿಕಾರಿಗಳು ನೀರು ಬಿಡುವುದನ್ನು ನಿಲ್ಲಸಬೇಕೆಂದು ಒತ್ತಾಯಿಸಿದರು.
Advertisement
ನೀರಿನ ಮಟ್ಟ ಎಷ್ಟಿದೆ?
ನೀರಿನ ಇಂದಿನ ಮಟ್ಟ- 93.60 ಅಡಿ
ಡ್ಯಾಂ ನ ಗರಿಷ್ಠ ಮಟ್ಟ 124.80 ಅಡಿ
ಒಳಹರಿವು – 19,714 ಕ್ಯೂಸೆಕ್
ಹೊರ ಹರಿವು- 5401 ಕ್ಯೂಸೆಕ್
ನೀರಿನ ಸಂಗ್ರಹ – 18.199 ಟಿಎಂಸಿ
ಗರಿಷ್ಟ ಸಂಗ್ರಹ – 49.452 ಟಿಎಂಸಿ