ಮಂಡ್ಯ: ಭಾರೀ ಮಳೆಯಿಂದಾಗಿ ಕಾವೇರಿ ಮತ್ತು ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಕಾರಣ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈಗಾಗಲೇ 117.75 ಅಡಿ ನೀರು ತುಂಬಿದೆ. 70 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, 75 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದ್ದು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಪ್ರವಾಸಿ ತಾಣಗಳು ಜಲಾವೃತವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕೊಡಗಿನಲ್ಲಿ ಧಾರಾಕಾರ ಮಳೆ- ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ