ಮಂಡ್ಯ: ರಾಜ್ಯದ ಹಲವೆಡೆ ಅನೇಕ ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ಇದರಿಂದ ಈಗಾಗಲೇ ಹಲವು ದಿನಗಳು ತುಂಬಿ ಹರಿಯುತ್ತಿವೆ. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂನ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಮೂಲಕ ಡ್ಯಾಂನಲ್ಲಿ ನೀರಿನ ಮಟ್ಟ 107 ಅಡಿ ತಲುಪಿದೆ. ಜೊತೆಗೆ ಕೆಆರ್‌ಎಸ್ ಡ್ಯಾಂಗೆ ನೀರು ಹರಿದು ಬರುತ್ತಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಕಳೆದ ವರ್ಷ ಇದೇ ದಿನ 90.03 ಅಡಿ ನೀರು ಇತ್ತು. ಅಲ್ಲದೇ 995 ಕ್ಯೂಸೆಕ್ ಒಳ ಹರಿವು ಇತ್ತು.
Advertisement
Advertisement
ಕಳೆದ ಮೂರು ದಿನಗಳಿಂದ ಕೆಆರ್‌ಎಸ್ ಡ್ಯಾಂಗೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಪ್ರಸ್ತುತ 107 ಅಡಿ ಸಂಗ್ರಹವಾಗಿದೆ. ಅಣೆಕಟ್ಟೆಯ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ. ಇಂದಿನ ಒಳ ಹರಿವು 14,620 ಕ್ಯೂಸೆಕ್ ಇದ್ದು, ಹೊರ ಹರಿವು 4,655 ಕ್ಯೂಸೆಕ್ ಇದೆ. ಜೊತೆಗೆ ನೀರಿನ ಸಂಗ್ರಹ 28.810 ಟಿಎಂಸಿ ಇದೆ.