ಮುಂಬೈ: ಬಾಲಿವುಡ್ ನಟ ಹಾಗೂ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಸಂಜಯ್ ದತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಆಗಸ್ಟ್ 8ರಂದು ಸಂಜಯ್ ದತ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಭಾನುವಾರವಷ್ಟೇ ಸಂಜಯ್ ದತ್ ಆರಾಮಾಗಿದ್ದಾರೆ, ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಆಸ್ಪತ್ರೆ ತಿಳಿಸಿತ್ತು.
Advertisement
Advertisement
ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ನೆಗೆಟಿವ್ ವರದಿ ಬಂದಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಈ ಕುರಿತು ತಮ್ಮ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದರು. ನಾನು ಆರಾಗಿದ್ದೇನೆ, ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇನೆ. ವೈದ್ಯಕೀಯ ನಿಗಾ ವಹಿಸಲಾಗಿದೆ. ಕೊರೊನಾ ಪರೀಕ್ಷಾ ವರದಿ ಸಹ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದರು.
Advertisement
ಲೀಲಾವತಿ ಆಸ್ಪತ್ರೆ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಮನೆಗೆ ಮರಳುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಎಲ್ಲರೂ ಸುರಕ್ಷಿತವಾಗಿರಿ ಎಂದು ಈ ಹಿಂದೆ ಮಾಡಿದ್ದ ಟ್ವೀಟ್‍ನಲ್ಲಿ ತಿಳಿಸಿದ್ದರು.
Advertisement
Just wanted to assure everyone that I’m doing well. I’m currently under medical observation & my COVID-19 report is negative. With the help & care of the doctors, nurses & staff at Lilavati hospital, I should be home in a day or two. Thank you for your well wishes & blessings ????
— Sanjay Dutt (@duttsanjay) August 8, 2020
ಸಂಜಯ್ ದತ್ ಮಾನ್ಯತಾ ದತ್ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ ಮೊದಲ ಪತ್ನಿಯ ಒಬ್ಬ ಮಗಳಿದ್ದಾಳೆ. ಸಂಜಯ್ ದತ್ ಕನ್ನಡದ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬಾಲಿವುಡ್‍ನ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.