ಕಾರವಾರ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರವಾರದ ಅಂಕೋಲದ ಮಾಸ್ತಿಕಟ್ಟೆಯಲ್ಲಿ ನಡೆದಿದೆ.
ಮೃತನ ಗುರುತು ಪತ್ತೆಯಾಗಿಲ್ಲ. ಘಟನೆಯಿಂದ ಐವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆನಂದ್ ಟ್ರಾವೆಲ್ ಸಂಸ್ಥೆಗೆ ಸೇರಿದ ಬಸ್ ಬೆಂಗಳೂರಿನಿಂದ ಗೋವಾ ಕಡೆ ತೆರಳುತ್ತಿತ್ತು. ಈ ಬಸ್ಸಿನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.