ರಾಯಚೂರು: ಡಿಸಿ, ಸಿಇಓ ,ಎಸ್‍ಪಿ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಿರಾ? ಅಕ್ರಮ ಮರಳುಗಾರಿಕೆ, ಮಟಕಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ನೀವುಗಳು ಇದರಲ್ಲಿ ಶಾಮೀಲಾಗಿದ್ದಾರಾ? ಅಕ್ರಮ ನಡೆಯುತ್ತಿದ್ದರೂ ಯಾಕೆ ಸುಮ್ಮನಿದ್ದೀರಿ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಮುಂದೆ ನಾನು ಎಂತಹ ಉಸ್ತುವಾರಿ ಸಚಿವ ಎನ್ನುವುದನ್ನು ತೋರಿಸುತ್ತೇನೆ ಲಕ್ಷ್ಮಣ್ ಸವದಿ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ.
Advertisement
ನಗರದ ಜಿ.ಪಂ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲೆಯ ಶಾಸಕರು ಜಿಲ್ಲಾಡಳಿತ ವಿರುದ್ಧ ಆರೋಪಗಳ ಸುರಿಮಳೆಗೈದರು. ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಜಿಲ್ಲೆಯಲ್ಲಿ ಕೆಲಸಗಳು ಆಗುತ್ತಿಲ್ಲ ಎಂದು ಸಭೆಯಲ್ಲಿ ಶಾಸಕ ದದ್ದಲ ಬಸನಗೌಡ ಹಾಗೂ ಶಿವನಗೌಡ ಆರೋಪಿಸಿದರು. ಶಾಸಕರು ಲಂಚಕೊಟ್ಟು ಅಧಿಕಾರಿಗಳ ಹತ್ತಿರ ಕೆಲಸ ಮಾಡಿಸಿಕೊಳ್ಳಬೇಕಿದೆ ಅಂತ ಶಿವನಗೌಡ ನಾಯಕ್ ಬೇಸರ ವ್ಯಕ್ತಪಡಿಸಿದರು.
Advertisement
Advertisement
ಮರಳುಗಾರಿಕೆಗೆ ಬ್ರೇಕ್ ಬೀಳುತ್ತಿಲ್ಲ ಎಂದು ಶಾಸಕ ಬಸನಗೌಡ ಆಕ್ರೋಶಗೊಂಡರು. ದೊಡ್ಡ ಗಾಡಿಗಳಿಂದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಗೆ ಬರುವ ಅನುದಾನವೇ ಕಡಿಮೆಯಿದೆ. ಹತ್ತಿ ಹೊತ್ತು ಬರುವ ರೈತರ ಗಾಡಿಗಳಿಗೆ ದಂಡ ಹಾಕ್ತಾರೆ ಮರಳು ಲಾರಿಗಳನ್ನ ಹಾಗೆಯೇ ಬಿಡುತ್ತಾರೆ ಎಂದು ಶಾಸಕ ಬಸನಗೌಡ ಹೇಳಿದರು.
Advertisement
ಶಾಸಕರ ಆರೋಪ ಕುರಿತು ಅಧಿಕಾರಿಗಳನ್ನ ಪ್ರಶ್ನಿಸಿದ ಡಿಸಿಎಂ ಒಬ್ಬೊಬ್ಬರನ್ನೆ ತರಾಟೆಗೆ ತೆಗೆದುಕೊಂಡರು. ಆರ್ ಟಿ ಓ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಒಟ್ಟಾರೆ ಜಿಲ್ಲಾಡಳಿತ ಅಕ್ರಮದಲ್ಲಿ ಭಾಗಿಯಾಗಿದ್ದಾರಾ ಯಾಕೆ ಅಕ್ರಮ ತಡೆಯುತ್ತಿಲ್ಲ. ಅಕ್ರಮಕ್ಕೆ ಬ್ರೇಕ್ ಬೀಳದಿದ್ದರೆ ತಪ್ಪಿತಸ್ಥರನ್ನ ಅಮಾನತ್ತು ಮಾಡುವುದಾಗಿ ಎಚ್ಚರಿಕೆ ನೀಡಿದರು. ಮುಂದೆ ಅಕ್ರಮ ನಡೆದರೆ ಎಸ್ ಪಿ ಹಾಗೂ ಜಿಲ್ಲಾಧಿಕಾರಿಯೇ ಹೊಣೆಗಾರರಾಗುತ್ತಾರೆ ಎಂದರು.
ಇನ್ನೂ ಫಸಲ್ ಭೀಮಾ ಯೋಜನೆ ವಿಮಾ ಹಣ ರೈತರಿಗೆ ಸರಿಯಾಗಿ ತಲುಪುತ್ತಿಲ್ಲ, ಅಧಿಕಾರಿಗಳ ಕಿವಿ ಹಿಡಿದು ಶಾಸಕರು ಕೆಲಸಮಾಡಿಸಬೇಕಿದೆ. ಹಾಗಾದರೆ ಮಾತ್ರ ರೈತರು ಕಟ್ಟಿದ ಇನ್ಸೂರೆನ್ಸ್ ಹಣ ರೈತರಿಗೆ ಸಿಗುತ್ತದೆ ಅಂತ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಮಾನ್ವಿ ಶಾಸಕ ವೆಂಕಟಪ್ಪ ನಾಯಕ್ ಟಿಎಲ್ ಬಿಸಿ ಕೆಳ ಭಾಗದ ರೈತರಿಗೆ ನೀರು ಕೊಡುವಂತೆ ಒತ್ತಾಯ ಮಾಡಿದರು. ಐಸಿಸಿ ನಿರ್ಣಯದಂತೆ 3300 ಕ್ಯೂಸೆಕ್ ನೀರು ಹರಿಸುತ್ತಿಲ್ಲ. ಇದರಿಂದ ರೈತರು ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಕೂಡಲೇ ನೀರು ಹರಿಸುವ ಕಡೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಹಿಂದೆ ಭದ್ರಾದಿಂದ ನೀರು ತರಲಾಗಿತ್ತು ಈಗಲೂ ಬೇರೆಡೆಯಿಂದ ನೀರು ತಂದು ಕೊಡಿ ಎಂದು ವೆಂಕಟಪ್ಪ ನಾಯಕ್ ಪಟ್ಟು ಹಿಡಿದರು. ಭದ್ರಾದಿಂದ ನೀರು ತರುವ ಬಗ್ಗೆ ಮಾತನಾಡುವುದಾಗಿ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದರು.