ಸ್ಯಾಂಡಲ್‌ವುಡ್‌ನ ಹೆಸರಾಂತ ನಿರ್ದೇಶಕ ಪ್ರೇಮ್ (Director Prem) ಇದೀಗ ಅಮೃತಸರ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದಾರೆ. ‘ಕೆಡಿ’ (Kd Film) ಚಿತ್ರತಂಡದ ಜೊತೆ ಭೇಟಿ ನೀಡಿರುವ ಫೋಟೋಗಳನ್ನು ಪ್ರೇಮ್ ಹಂಚಿಕೊಂಡಿದ್ದಾರೆ.
‘ಕೆಡಿ’ ಟೀಮ್ ಜೊತೆ ಪಂಜಾಬ್‌ನ ಅಮೃತಸರ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ ಜೋಗಿ ಪ್ರೇಮ್. ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಸಿಕ್ಕ ಬೆನ್ನಲ್ಲೇ ದೇವರ ಸನ್ನಿಧಿಗೆ ಹೋಗಿದ್ದಾರೆ. ಇದನ್ನೂ ಓದಿ:ದಿ ಸಾಬರಮತಿ ರಿಪೋರ್ಟ್ ಟ್ರೈಲರ್ ರಿಲೀಸ್: ಚರ್ಚೆಗೆ ಕಾರಣವಾಯಿತು ಮತ್ತೊಂದು ಚಿತ್ರ
ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾಗೆ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಸದ್ಯದಲ್ಲೇ ಕೆಡಿ ಸಿನಿಮಾದ ರಿಲೀಸ್ ಕುರಿತು ಹೆಚ್ಚಿನ ಮಾಹಿತಿ ಸಿಗಲಿದೆ.
ಕೆವಿಎನ್ ನಿರ್ಮಾಣ ಸಂಸ್ಥೆ ಜೊತೆ ಪ್ರೇಮ್ ಕೈಜೋಡಿಸಿದ್ದಾರೆ. ದರ್ಶನ್‌ಗೆ (Darshan) ಹಲವು ವರ್ಷಗಳ ನಂತರ ಪ್ರೇಮ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಜೈ ಶ್ರೀರಾಮ್ ಎಂದು ಗದೆ ಎತ್ತಿ ದರ್ಶನ್ ಹೊಸ ಸಿನಿಮಾದ ಟೀಸರ್ ಕೂಡ ರಿವೀಲ್ ಮಾಡಲಾಗಿತ್ತು. ಸದ್ಯದಲ್ಲೇ ಚಿತ್ರದ ಶೂಟಿಂಗ್ ಅಪ್‌ಡೇಟ್ ಕೂಡ ಸಿಗಲಿದೆ. ಒಟ್ನಲ್ಲಿ ಪ್ರೇಮ್ ಬತ್ತಳಿಕೆಯಿಂದ ಬರುವ ಸಿನಿಮಾಗಳ ಬಗ್ಗೆ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ.