ಚಿಕ್ಕಬಳ್ಳಾಪುರ: ಕೆಲಸಕ್ಕೆ ತೆರಳುತ್ತಿದ್ದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಐವಾರಪಲ್ಲಿ ಗ್ರಾಮದ ನರಸಿಂಹಮೂರ್ತಿ ಹಲ್ಲೆಗೊಳಗಾದ ವ್ಯಕ್ತಿ. ನರಸಿಂಹಮೂರ್ತಿ ಎಂದಿನಂತೆ ಬೆಳಗ್ಗೆ ತರಕಾರಿ ಮಾರುಕಟ್ಟೆಗೆ ಬೈಕ್ ನಲ್ಲಿ ಹೋಗುತ್ತಿದ್ದರು. ಟಾಟಾಸುಮೋ ವಾಹನದಲ್ಲಿ ಬಂದವರು ಅಡ್ಡಗಟ್ಟಿ ಲಾಂಗ್ ಮಚ್ಚುಗಳಿಂದ ಅಟ್ಯಾಕ್ ಮಾಡಿದ್ದಾರೆ. ಪರಿಣಾಮ ನರಸಿಂಹಮೂರ್ತಿ ಗಂಭೀರವಾಗಿ ಗಾಯಗೊಂಡಿದ್ದು, ಬಾಗೇಪಲ್ಲಿ ತಾಲೂಕು ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ನಂತರ ಟಾಟಾಸುಮೋ ವಾಹನ ಬಿಟ್ಟು ಹಲ್ಲೆಕೋರರು ಪರಾರಿಯಾಗಿದ್ದಾರೆ. ವಾಹನದ ನಂಬರ್ ಆಧರಿಸಿ ಮಾಲೀಕರ ಪತ್ತ ಮಾಡಿ ಹಲ್ಲೆಕೋರರ ಬಂಧನಕ್ಕ ಪೊಲೀಸರು ಬಲೆ ಬೀಸಿದ್ದಾರೆ. ಮಾರಣಾಂತಿಕ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.