ಹಾಸನ: ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರಿಗೆ ದಕ್ಷತೆಯಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು. ಇದನ್ನೂ ಓದಿ: ದುಷ್ಕರ್ಮಿಗಳ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ – ಭಯದಿಂದ ಬಾತ್‍ರೂಮಿನಲ್ಲಿ 3 ಗಂಟೆ ಬಚ್ಚಿಟ್ಟುಕೊಂಡಿದ್ದ ಕುಟುಂಬ
Advertisement
Advertisement
ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಇದನ್ನೂ ಓದಿ: ಬೆಂಕಿ ಹಚ್ಚೋದು ನಮ್ಮ ಸಂಸ್ಕೃತಿಯಲ್ಲ, ನೆಲದ ಕಾನೂನೇ ಅಂತಿಮ: ಖಾದರ್