ಕೋಲಾರ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ಹಲವು ಬಾರಿ ಪತಿಯೊಂದಿಗೆ ಜೈಲು ವಾಸ ಅನುಭವಿಸಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಪತ್ನಿ ಪ್ರಮೀಳಮ್ಮ(95) ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಅವರ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದು, ಪ್ರಮೀಳಮ್ಮ ನಿಧನಕ್ಕೆ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕು ಗುಟ್ಟಹಳ್ಳಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ಮಾಡಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
Advertisement
Advertisement
ಹೈನೋದ್ಯಮದ ಹರಿಕಾರ ಎಂಬ ಖ್ಯಾತಿ ಪಡೆದಿದ್ದ ಕೇಂದ್ರದ ಮಾಜಿ ಸಚಿವ ಎಂ.ವಿ.ಕೃಷ್ಣಪ್ಪ ಅವರ ಪತ್ನಿ ಪ್ರಮೀಳಾ ಅವರನ್ನು ಪತಿಯೊಂದಿಗೆ ಹಲವು ಬಾರಿ ಜೈಲಿಗಟ್ಟಿದ್ದರು. ಪ್ರಮೀಳಮ್ಮನವರು ಪತಿಯೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದು, ಮಾಜಿ ಪ್ರಧಾನಿ ಜವಾಹರ್‍ಲಾಲ್ ನೆಹರು ಅವರ ಸಂಪುಟದಲ್ಲಿ ಸಚಿವರಾಗಿದ್ದ ಎಂ.ವಿ.ಕೃಷ್ಷಪ್ಪ ಅವರು ಜಿಲ್ಲೆಯಲ್ಲಿ ಹಾಗೂ ಕ್ಷೀರ ಕ್ರಾಂತಿಯ ಹರಿಕಾರ ಎಂದೆ ಖ್ಯಾತಿ ಪಡೆದಿದ್ದರು. ಇಂದು ಸಂಜೆ ಪತಿ ಎಂ.ವಿ.ಕೃಷ್ಣಪ್ಪ ಅವರ ಸಮಾಧಿ ಬಳಿ ಪ್ರಮೀಳಾ ಅವರ ಅಂತ್ಯಕ್ರಿಯೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.