ಚಾಮರಾಜನಗರ: ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಜಿಲ್ಲೆಯ ಗಡಿ ಮೂಲಕ ಎರಡೂ ರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖಗೊಂಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ಕೆಎಸ್‍ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
Advertisement
ನಿತ್ಯ ಗುಂಡ್ಲುಪೇಟೆಯಿಂದ ಕೇರಳದ ಸುಲ್ತಾನ್ ಬತೇರಿ, ಕಲ್ಪೆಟ್ಟ, ಕ್ಯಾಲಿಕಟ್, ತ್ರಿಶೂರು ಮೊದಲಾದ ಕಡೆ ಕೆಎಸ್‍ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಪ್ರಯಾಣಿಕರೇ ಬಾರದ ಕಾರಣ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಕೇರಳದ ಬಸ್ ಗಳು ಸಹ ಕರ್ನಾಟಕಕ್ಕೆ ಸಂಚಾರ ನಿಲ್ಲಿಸಿವೆ. ಇದನ್ನೂ ಓದಿ: ಕೊರೊನಾ ಪ್ರಕರಣಗಳು ಹೆಚ್ಚಳ, ವೀಕೆಂಡ್ ಲಾಕ್‍ಡೌನ್ ಸೂಕ್ತ: ಕೆ.ಜಿ.ಬೋಪಯ್ಯ
Advertisement
Advertisement
ಕೇರಳದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ, ಇಲ್ಲವೇ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಕಡ್ಡಾಯವಾಗಿದೆ.