ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ. ಎಸ್‍ಎಸ್‍ಎಲ್‍ಸಿ ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮಡಿಕೇರಿ ತಾಲೂಕಿನ ಬೆಟ್ಟಗೇರಿ ನಿವಾಸಿ ಶಿಕ್ಷಕಿ ಕವಿತಾ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷೆಯ ಮೌಲ್ಯ ಮಾಪನಕ್ಕೆ ಹಾಜರಾಗಿದ್ದರು. ಕವಿತಾ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಆದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪರಿಕ್ಷಾ ಮೌಲ್ಯ ಮಾಪನಕ್ಕೆ ಆಗಮಿಸಿದ್ದರು. ಈ ಮೂಲಕ ಶಿಕ್ಷಕಿ ತಮ್ಮ ವೃತ್ತಿ ಬದ್ಧತೆ ತೋರಿದ್ದರು.