ಮಂಗಳೂರು: ಮುಂದಿನ ದಿನಗಳಲ್ಲಿ ನಮಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು ಎಂದು ಕೋರ್ಟ್ ಮೊರೆ ಹೋಗಿದ್ದೇವೆ. ಇದನ್ನು ಹೊರತುಪಡಿಸಿ ನಮ್ಮ ಕೈ ಬಾಯಿ ಶುದ್ಧವಾಗಿದೆ ಎಂದು ಸಚಿವರಾದ ಬೈರತಿ ಬಸವರಾಜ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮವದವರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನಾವು ನಮ್ಮ ಅವಶ್ಯಕತೆಗಾಗಿ ಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಇದನ್ನು ಹೊರತುಪಡಿಸಿ ಮುಂಬೈಗೆ ಹೋದ ಸಂದರ್ಭ ಏನೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಕಾಂಗ್ರೆಸ್ ಪಕ್ಷದಿಂದ ಬಂದವರೆಂದು ನಮಗೆ ಯಾರೂ ತೊಂದರೆ ಕೊಡಬಾರದೆಂಬ ಉದ್ದೇಶದಿಂದ ನಾವು ವೈಯಕ್ತಿಕವಾಗಿ ಕೋರ್ಟ್ ಮೊರೆ ಹೋಗಿದ್ದೇವೆ. ಇದನ್ನು ಹೊರತು ಪಡಿಸಿ ಬೇರೆ ಏನು ಇಲ್ಲ. ಆರೋಪ ಮಾಡುವವರ ಬಳಿ ಆಧಾರ ಇದ್ದರೆ ಬಿಡುಗಡೆ ಮಾಡಲಿ ಎಂದು ತಿಳಿಸಿದರು.
ನಾವು ಬೇರೆ ಪಕ್ಷದಿಂದ ಬಂದವರು ಸರ್ಕಾರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ಅದನ್ನು ಸಹಿಸಲಾಗದೆ ಕೆಲವರು ನಮ್ಮ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಇದನ್ನು ತಡೆಹಿಡಿಯುವ ಉದ್ದೇಶದಿಂದ ಕೋರ್ಟ್‍ಗೆ ಹೋಗಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.