ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಕೊರೊನಾ ಸೋಂಕಿತರ ಸಂಖ್ಯೆ 192ಕ್ಕೆ ಇಳಿಕೆಯಾಗಿದೆ. ಆದರೆ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ.
ಮಂಗಳವಾರ ಮಡಿಕೇರಿ ತಾಲೂಕಿನಲ್ಲಿ 63, ಸೋಮವಾರಪೇಟೆ ತಾಲೂಕಿನಲ್ಲಿ 69 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 60 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿರುವುದು ಸಮಾಧಾನ ತಂದಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 696 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 16,820ಗೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 3,546 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 20,620ರಷ್ಟಾಗಿದೆ. ಮಂಗಳವಾರ 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸಾವನ್ನಪ್ಪಿದವರ ಒಟ್ಟು ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಹೊಸದಾಗಿ 16 ಕಂಟೈನ್‍ಮೆಂಟ್ ವಲಯಗಳನ್ನು ತೆರೆಯಲಾಗಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 451ರಷ್ಟಿದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವಿವರಿಸಿದ್ದಾರೆ.