ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಸಾಧಾರಣವಾಗಿ ಬರುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಸುರಿಯಲಾರಂಭಿಸಿದೆ.
ತಲಕಾವೇರಿ, ಭಾಗಮಂಡಲ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ಮಡಿಕೇರಿ ಮತ್ತು ಮಾದಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Advertisement
Advertisement
ಸೋಮವಾರ 64 ಮಿಲಿ ಮೀಟರ್‌ನಿಂದ 115 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಮಂಗಳವಾರ ಅದರ ತೀವ್ರತೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, 115 ಮಿಲಿ ಮೀಟರ್‌ನಿಂದ 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
Advertisement
ಈ ಮಾಹಿತಿಯ ಆಧಾರದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಬೆಳಗ್ಗೆ 6 ಗಂಟೆಯವರೆಗೆ ಯೆಲ್ಲೊ ಅಲರ್ಟ್ ಮತ್ತು ಮಂಗಳವಾರ ಬೆಳಗ್ಗೆ 6 ರಿಂದ ಬುಧವಾರ ಬೆಳಗ್ಗೆ 6 ಗಂಟೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಸಮಯದಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.