– ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು
ಮಂಡ್ಯ: ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರು ಹರಿದು ಬರುತ್ತಿದೆ.
Advertisement
ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದಾಗಿ ಕೆಆರ್‍ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪನವರು ಜಲಾಶಯಕ್ಕೆ ಬಾಗೀನವನ್ನು ಅರ್ಪಿಸಿದರು. ಇದಾದ ಬಳಿಕ ಕೊಡಗು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಕಳೆದ ಎರಡ್ಮೂರು ದಿನಗಳಿಂದ ಮತ್ತೆ ಮಳೆ ಸುರಿಯಲು ಆರಂಭವಾಗಿದೆ. ಹೀಗಾಗಿ ಸದ್ಯ ಕೆಆರ್‍ಎಸ್ ಜಲಾಶಯಕ್ಕೆ 10,035 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
Advertisement
Advertisement
ಇಂದು ಹಾಗೂ ನಾಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಪ್ರಸ್ತುತ ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಕೆಆರ್‍ಎಸ್ ಜಲಾಶಯದ ಇಂದಿನ ಮಟ್ಟ 124.65 ಅಡಿ ಇದ್ದು, ಒಳ ಹರಿವು 10,035 ಕ್ಯೂಸೆಕ್ ಇದೆ. ಹೊರ ಹರಿವು 15,681 ಕ್ಯೂಸೆಕ್ ಇದೆ. ಕೆಆರ್‍ಎಸ್ ಜಲಾಶಯದಲ್ಲಿ ಪ್ರಸ್ತುತ 49.243 ಟಿಎಂಸಿ ನೀರು ಸಂಗ್ರಹವಾಗಿದೆ.