ಕೊಡಗಿನಲ್ಲಿ ಭಾರೀ ಮಳೆ- ಹಳದಿ ಅಲರ್ಟ್‌ ಘೋಷಣೆ

Public TV
1 Min Read
mdk rain

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ  ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮೇ 18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

vlcsnap 2020 05 18 18h21m24s956

ಮೇ 18 ರಿಂದ 19ರ ಬೆಳಗ್ಗೆ ವರೆಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 64 ಮಿ.ಮೀ.ನಿಂದ 115 ಮಿ.ಮೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಾದ್ಯಂತ ರಾತ್ರಿಯಿಡಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಬೆಳಗ್ಗೆಯೂ ಮಳೆ ವೇಗ ಪಡೆದಿದೆ. ಮಧ್ಯರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಭ್ರಹ್ಮಗಿರಿ, ತಲಕಾವೇರಿ, ಭಾಗಮಂಡಲ ಸೇರಿದಂತೆ ವಿರಾಜಪೇಟೆ ವ್ಯಾಪ್ತಿಯಲ್ಲಿ ಜೋರು ಮಳೆ ಆಗುತ್ತಿದೆ. ಜಿಟಿ, ಜಿಟಿ ಸುರಿಯುತ್ತಿರುವ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

vlcsnap 2020 05 18 18h21m16s517

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಣ್ಣ ಪುಲಿಕೋಟು ಗ್ರಾಮದಲ್ಲಿ ಬೃಹದಾಕಾರದ ಮರ ಬಿದ್ದ ಪರಿಣಾಮ ಪಾರ್ವತಿಯವರ ಸ್ನಾನ ಗೃಹ ಮತ್ತು ದನದ ಕೊಟ್ಟಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಭಾಂಗಮಂಡಲ ಪಿಡಿಒ, ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದ ಜೋತೆಗೆ ಚಳಿಯ ವಾತಾವರಣ ಹೆಚ್ಚಾಗಿದೆ.

Share This Article
Leave a Comment

Leave a Reply

Your email address will not be published. Required fields are marked *