ಕೊಡಗಿನ ಪಿಯು ವಿದ್ಯಾರ್ಥಿಗಳಿಗೆ ಕೋವಿಡ್ – ಶಿವಮೊಗ್ಗದಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ

Public TV
2 Min Read
SMG Police 2

ಕೊಡಗು/ಶಿವಮೊಗ್ಗ: ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಸೋಮವಾರಪೇಟೆಯ ಸಂತ ಜೋಸೆಫ್ ಕಾಲೇಜಿನ ವಿದ್ಯಾರ್ಥಿ ಮತ್ತು ಕುಶಾಲನಗರ ಸಮೀಪದ ಶಿರಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಗೂ ಕೋವಿಡ್ ದೃಢಪಟ್ಟಿದೆ ಎಂದು ಕೊಡಗು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ವಿಷ್ಣುಮೂರ್ತಿ ಖಚಿತಪಡಿಸಿದ್ದಾರೆ.

mdk students corona

ಈ ವಿದ್ಯಾರ್ಥಿಗಳ ಇಬ್ಬರ ಆರೋಗ್ಯ ಉತ್ತಮವಾಗಿದ್ದು, ಇಬ್ಬರಿಗೂ ಹೋಂಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಆದೇಶದಂತೆ ಪ್ರತೀ ಹದಿನೈದು ದಿನಗಳಿಗೆ ಒಮ್ಮೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಅದೇ ರೀತಿಯಲ್ಲೇ ಎಂದಿನಂತೆ ತಪಾಸಣೆ ಮಾಡುವಾಗಿ ಈ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಇರೋದು ದೃಢಪಟ್ಟಿದೆ.

SMG Police 1

ಕೊರೊನಾ ಬಗ್ಗೆ ವಿಭಿನ್ನ ಜಾಗೃತಿ: ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ.

Shivamogga 1

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಮಾಸ್ಕ್ ಧರಿಸದೇ ಇದ್ದವರಿಗೆ ನಯವಾಗಿಯೇ ತಿಳುವಳಿಕೆ ಹೇಳಿ ಉಚಿತವಾಗಿ ಮಾಸ್ಕ್ ವಿತರಿಸಿ ಧರಿಸಲು ಸೂಚಿಸಿದರು. ಪೊಲೀಸರನ್ನು ಕಂಡೊಡನೆ ಬಾಯಿಗೆ ಬಟ್ಟೆ ಸುತ್ತಿಕೊಂಡ ವ್ಯಕ್ತಿಯೊಬ್ಬರಿಗೆ, ನೀವು ಈಗ ಬಟ್ಟೆ ಸುತ್ತಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳಬಹುದು ಆದರೆ ಕೊರೊನಾದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳುವಳಿಕೆ ನೀಡಿದರು.

Shivamogga 2

ಮಾಸ್ಕ್ ಇಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದ ಕುಟುಂಬದ ಸದಸ್ಯರಿಗೆ ಮಾಸ್ಕ್ ವಿತರಿಸಿದ ಅವರು ಮಕ್ಕಳಿಗೆ ಸ್ವತಃ ಮಾಸ್ಕ್ ತೊಡಿಸಿ ಕೊರೊನಾದ ಬಗ್ಗೆ ನಿರ್ಲಕ್ಷ್ಯ ಜೀವಕ್ಕೆ ಅಪಾಯ ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದರು. ನಿಲ್ದಾಣದಲ್ಲಿದ್ದ ಬಸ್‍ಗಳಿಗೆ ಹತ್ತಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ತಿಳುವಳಿಕೆ ನೀಡಿದರು.

Shivamogga 4

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಗುತ್ತಿದೆ. ಮಾಸ್ಕ್ ಧರಿಸದವರಿಂದ ದಂಡ ವಿಧಿಸಲಾಗುತ್ತಿದೆ. ಭಾನುವಾರ ಮಾಸ್ಕ್ ಧರಿಸದ 1,146 ಪ್ರಕರಣಗಳನ್ನು ಗುರುತಿಸಿ 1.48 ಲಕ್ಷ ದಂಡ ವಸೂಲು ಮಾಡಲಾಗಿದೆ. ಚಾಲಕರಿಗೆ ಸ್ಯಾನಿಟೈಸರ್ ನೀಡಿ, ಪ್ರತಿಯೊಬ್ಬ ಪ್ರಯಾಣಿಕ ಇದನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಇದೇ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *