ಮಡಿಕೇರಿ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 31 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಅದರಲ್ಲಿ 8 ವೈದ್ಯರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಡಿ ಗ್ರೂಪ್ ನೌಕರರು, ನರ್ಸ್, ಮೆಡಿಕಲ್ ಆಫೀಸರ್ಸ್ ಸೇರಿ 31 ಜನರಿಗೆ ಕೊರೊನಾ ತಗುಲಿದೆ.
ಕೋವಿಡ್ ಆಸ್ಪತ್ರೆಯಲ್ಲಿ ನಿತ್ಯ ಕೆಲಸ ಮಾಡುವ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ. ಮೊದಲ ಅಲೆಯಲ್ಲಿ ಇಷ್ಟು ಪ್ರಮಾಣದಲ್ಲಿ ಪಾಸಿಟಿವ್ ಬಂದಿರಲ್ಲಿಲ್ಲ. ಆದರೆ ಎರಡನೇ ಅಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ವೈದ್ಯರು ಮತ್ತು ಸಿಬ್ಬಂದಿ ಒಟ್ಟು 31 ಜನರನ್ನು 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ.
ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ ತರಬೇತಿ ನಿರತ ಮತ್ತು ಖಾಯಂ ವೈದ್ಯರು ಸೇರಿ 123 ವೈದ್ಯರು ಕರ್ತವ್ಯ ಮಾಡುತ್ತಿದ್ದಾರೆ. ಒತ್ತಡ ಇದ್ದರೂ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡುತ್ತಿದ್ದೇವೆ. ಸಿಬ್ಬಂದಿ ಕೊರತೆಯಿಂದ ಈಗ ಕೆಲಸ ಮಾಡುತ್ತಿರುವವರೇ ಅನಿವಾರ್ಯತೆ ಬಂದಿದೆ. ಕೋವಿಡ್-19 ಆಸ್ಪತ್ರೆಯಲ್ಲಿ ಇರುವ ಸೋಂಕಿತರಿಗೆ ಯಾವುದೇ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಇರುವ ಸಿಬ್ಬಂದಿಗೆ ಮನವಿ ಮಾಡಿಕೊಂಡರು ಕರ್ತವ್ಯ ನಿರ್ವಹಣೆ ಮಾಡುತ್ತಿದೇವೆ ಎಂದು ಮೆಡಿಕಲ್ ಸೂಪರಿಡೆಂಟೆಂಡ್ ಲೋಕೇಶ್ ಮಾಹಿತಿ ನೀಡಿದರು.