Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನಲ್ಲಿ ಜುಲೈ 5ರವರೆಗೆ ಲಾಕ್‍ಡೌನ್ ಮುಂದುವರಿಕೆ – ಖರೀದಿಗೆ ಸಮಯ ನಿಗದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿನಲ್ಲಿ ಜುಲೈ 5ರವರೆಗೆ ಲಾಕ್‍ಡೌನ್ ಮುಂದುವರಿಕೆ – ಖರೀದಿಗೆ ಸಮಯ ನಿಗದಿ

Districts

ಕೊಡಗಿನಲ್ಲಿ ಜುಲೈ 5ರವರೆಗೆ ಲಾಕ್‍ಡೌನ್ ಮುಂದುವರಿಕೆ – ಖರೀದಿಗೆ ಸಮಯ ನಿಗದಿ

Public TV
Last updated: June 20, 2021 2:36 pm
Public TV
Share
3 Min Read
mdk dc 1
SHARE

ಮಡಿಕೇರಿ: ಸರ್ಕಾರದ ಇತ್ತೀಚಿನ ಆದೇಶ ಮಾರ್ಗಸೂಚಿಯಂತೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಕೊಡಗು ಜಿಲ್ಲೆಯು 2ನೇ ವರ್ಗದಲ್ಲಿ ಇದೆ. ಕೊಡಗು ಜಿಲ್ಲೆಯಲ್ಲಿ ಕೋವಿಡ್ 19 ಸೋಂಕನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರದ ಲಾಕ್‍ಡೌನ್ ಆದೇಶವನ್ನು ಗಮನದಲ್ಲಿರಿಸಿಕೊಂಡು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ಅಂಶಗಳಂತೆ ಹಾಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಾವಳಿಯನ್ನು ಜುಲೈ 5ರವರೆಗೆ 6 ಗಂಟೆಯವರೆಗೆ ಯಥಾವತ್ತಾಗಿ ಜಾರಿಯಲ್ಲಿರುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

Kodagu DC charulatha somal corona covid 19

1. ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ ಕಾಮ್ಸ್ ಮಳಿಗೆಗಳನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಲಾಗಿದೆ.

2. ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ನಿಗದಿಪಡಿಸಿದ ಸಮಯದಲ್ಲಿ (ಬೆಳಿಗ್ಗೆ 6 ರಿಂದ ಮಧ್ಯಾಹ್ನ 01 ವರೆಗೆ)ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರತಕ್ಕದ್ದು.

lockdown

3. ಜಿಲ್ಲೆಯ ಸಾರ್ವಜನಿಕರಿಗೆ ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ಕೋಟ್, ಛತ್ರಿ, ಟಾರ್ಪಲ್‍ಗಳು, ಬಟ್ಟೆಬರೆ, ಚಪ್ಪಲಿ, ಗಮ್ ಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

4. ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅನುಮತಿಸಿದೆ.

5. ಸ್ಟಾಂಡ್ ಅಲೋನ್ ಹಾಲಿನ ಬೂತ್‍ಗಳು, ದಿನಪತ್ರಿಕೆಗಳ ಸೆಗ್ರಿಗೇಷನ್ ಮತ್ತು ವಿತರಣೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಅನುಮತಿಸಿದೆ.

mdk dc

6. ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್ ಗಳು, ಎಲ್.ಪಿ.ಜಿ ಕೇಂದ್ರಗಳ 24×7 ಕಾರ್ಯಚಟುವಟಿಕೆಗೆ ಅನುಮತಿಸಲಾಗಿದೆ.

7. ಹೋಟೆಲ್ / ರೆಸ್ಟೋರೆಂಟ್ ಗಳಿಂದ ಆಹಾರವನ್ನು ಟೇಕ್ ಅವೆ (ಪಾರ್ಸಲ್) ರೂಪದಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೆಯಲು ಅನುಮತಿಸಿದೆ.

8. ಸ್ಟಾಂಡ್ ಅಲೋನ್, ಸಿಎಲ್-2, ಸಿಎಲ್-8, ಸಿಎಲ್-8ಎ, ಸಿಎಲ್-8ಬಿ, ಸಿಎಲ್-11ಸಿ, ಸಿಎಲ್-16, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-7ಬಿ, ಸಿಎಲ್-9, ಸಿಎಲ್-17, ಸಿಎಲ್-18, ವೈನ್ ಬೋಟಿಕ್ ಸನ್ನದುಗಳಲ್ಲಿ, ಬಾಟಲ್ಡ್ ಬಿಯರ್ ಮತ್ತು ವೈನ್ ಟವರಿನ್ ಸನ್ನದುಗಳಿಂದ ಟೇಕ್ ಅವೆ ರೂಪದಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಮಾತ್ರ ಅನುಮತಿಸಿದೆ.

9. ಜಿಲ್ಲೆಗೆ ಆಗಮಿಸುವವರನ್ನು ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರತಕ್ಕದ್ದು.

FotoJet 23 1

10. ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ / ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದಾಗ್ಯೂ ಸಹ ಸದರಿಯವರು ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸತಕ್ಕದ್ದು.

11. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು/ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಇದನ್ನೂ ಓದಿ: ವಿಕಲಚೇತನರಿಗೆ ಫುಡ್‍ಕಿಟ್ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‍ಐಆರ್

TAGGED:CoronaCovid 19LockdownmadikeriPublic TVಕೊಡಗುಕೊರೊನಾಕೋವಿಡ್ 19ಪಬ್ಲಿಕ್ ಟಿವಿ Kodaguಮಡಿಕೇರಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
1 minute ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
34 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
35 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
1 hour ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
1 hour ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?