ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನ ಸಂಚಾರದ ನಿರ್ಬಂಧ ವಿಧಿಸಿ ಹೊರಡಿಸಲಾದ ಆದೇಶವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾರ್ಪಾಡು ಮಾಡಿದ್ದಾರೆ.
Advertisement
ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ಮಾಡುವ ವಾಹನಗಳನ್ನು ಮಾತ್ರ ನಿರ್ಭಂದಿಸಲಾಗಿದೆ. ಉಳಿದ ವಾಹನಗಳು ಸಂಚರಿಸಬಹುದಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಹಾಗೂ ಆಗಸ್ಟ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Advertisement
Advertisement
ಉಳಿದಂತೆ ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳ(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಅಥವಾ ಇಲಾಖೆ ವತಿಯಿಂದ ಚಾಲ್ತಿಯಲ್ಲಿರುವ ಆದೇಶ, ನಿಯಮ, ನಿರ್ಬಂದ, ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಉಲ್ಲಂಘನೆಯು ಸಂಬಂಧಪಟ್ಟ ಕಾಯ್ದೆಯಡಿ ದಂಡನೀಯವಾಗಿದೆ ಎಂದು ಹೇಳಿದ್ದಾರೆ.