ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್- 19 ಸೋಂಕನ್ನು ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಲಿ ಜಾರಿಯಲ್ಲಿರುವ ಸರ್ಕಾರದ ಲಾಕ್‍ಡೌನ್ ಆದೇಶವನ್ನು ಗಮನದಲ್ಲಿರಿಸಿಕೊಂಡು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ಅಂಶಗಳಂತೆ ಹಾಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿಯಮಾವಳಿಗಳನ್ನು ದಿನಾಂಕ 05.07.2021ರ ಬೆಳಗ್ಗೆ 6:00 ಗಂಟೆಯಿಂದ ದಿನಾಂಕ 19.07.2021ರ ಬೆಳಗ್ಗೆ 6:00 ಗಂಟೆಯವರೆಗೆ ಈ ಕೆಳಕಂಡ ಭಾಗಶ: ಮಾರ್ಪಾಡಿನಂತೆ ಜಾರಿಯಲ್ಲಿಗೊಳಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಕೊಡಗು ಜಿಲ್ಲಾಡಳಿತ ಆದೇಶಿಸಲಾಗಿದೆ.
1. ಕಂಟೈನ್‍ಮೆಂಟ್ ವಲಯದಲ್ಲಿ ಯಾವುದೇ ಚಟುವಳಿಕೆಗಳು ಇರುವುದಿಲ್ಲ.
Advertisement
2. ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ ಕಾಮ್ಸ್ ಮಳಿಗೆಗಳನ್ನು ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ.
Advertisement
Advertisement
3. ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ (ಸೋಮವಾರ ದಿಂದ ಶುಕ್ರವಾರದವರೆಗೆ) ನಿಗದಿಪಡಿಸಿದ ಸಮಯದಲ್ಲಿ (ಬೆಳಗ್ಗೆ 6.00 ರಿಂದ ಮಧ್ಯಾಹ್ನ 02.00) ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರತಕ್ಕದ್ದು.
Advertisement
4. ಜಿಲ್ಲೆಯ ಸಾರ್ವಜನಿಕರಿಗೆ ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ ಕೋಟ್, ಛತ್ರಿ, ಟಾರ್ಪಲ್ಗಳು, ಬಟ್ಟೆಬರೆ, ಚಪ್ಪಲಿ, ಗಮ್ ಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಿದೆ.
5. ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ ದಿಂದ ಶುಕ್ರವಾರದವರೆಗೆ ಮಾತ್ರ ತೆರೆಯಲು ಅನುಮತಿಸಿದೆ.
6. ಸ್ಟಾಂಡ್ ಅಲೋನ್ ಹಾಲಿನ ಬೂತ್ಗಳು, ದಿನಪತ್ರಿಕೆಗಳ ಸೆಗ್ರಿಗೇಷನ್ ಮತ್ತು ವಿತರಣೆಗೆ ಪ್ರತಿದಿನ ಬೆಳಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಅನುಮತಿಸಿದೆ.
7. ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್ ಗಳು, ಎಲ್.ಪಿ.ಜಿ ಕೇಂದ್ರಗಳ 24*7 ಕಾರ್ಯಚಟುವಟಿಕೆಗೆ ಅನುಮತಿಸಲಾಗಿದೆ.
8. ಹೋಟೆಲ್ / ರೆಸ್ಟೋರೆಂಟ್ ಗಳಿಂದ ಆಹಾರವನ್ನು ಟೇಕ್ ಅವೆ (ಪಾರ್ಸಲ್) ರೂಪದಲ್ಲಿ ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಪಡೆಯಲು ಅನುಮತಿಸಿದೆ. ಹಾಗೆಯೇ ಹೋಟೆಲ್ / ರೆಸ್ಟೋರೆಂಟ್ ಗಳಿಂದ ಹೋಮ್ ಡೆಲಿವರಿ ನೀಡಲು ಬೆಳಗ್ಗೆ 6.00 ರಿಂದ ಸಂಜೆ 8.00 ರವರೆಗೆ ಅನುಮತಿಸಿದೆ.
9. ಸ್ಟಾಂಡ್ ಅಲೋನ್, ಸಿಎಲ್-2, ಸಿಎಲ್-8, ಸಿಎಲ್-8ಎ, ಸಿಎಲ್-8ಬಿ, ಸಿಎಲ್-11ಸಿ, ಸಿಎಲ್-16, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-7ಬಿ, ಸಿಎಲ್-9, ಸಿಎಲ್-17, ಸಿಎಲ್-18, ವೈನ್ ಬೋಟಿಕ್ ಸನ್ನದುಗಳಲ್ಲಿ, ಬಾಟಲ್ಡ್ ಬಿಯರ್ ಮತ್ತು ವೈನ್ ಟವರಿನ್ ಸನ್ನದುಗಳಿಂದ ಟೇಕ್ ಅವೆ ರೂಪದಲ್ಲಿ ಸೋಮವಾರ ದಿಂದ ಶುಕ್ರವಾರದವರೆಗೆ ಬೆಳಗ್ಗೆ 06.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಮಾತ್ರ ಅನುಮತಿಸಿದೆ.
10. ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರತಕ್ಕದ್ದು. ಇದನ್ನೂ ಓದಿ: ಹೊರಗಿನವರಿಗಿಲ್ಲ ಬ್ರೇಕ್ – ಕೊಡಗಿನಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ
11. ಸರ್ಕಾರದ ಇತ್ತೀಚಿನ ಸುತ್ತೋಲೆಯಂತೆ ನೆರೆಯ ಕೇರಳ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಅವಧಿಯೊಳಗಿನ ಕೋವಿಡ್ ನೆಗೆಟಿವ್ ವರದಿ (ಆರ್.ಟಿ.ಪಿ.ಸಿ.ಆರ್ ವರದಿ) ಹೊಂದಿರತಕ್ಕದ್ದು.
12. ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ / ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ / ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದಾಗ್ಯೂ ಸಹ ಸದರಿಯವರು ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸತಕ್ಕದ್ದು.
13. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು / ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
14. ಕೊಡಗು ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ್ಲಿ ಮೃತರ ಅಂತ್ಯಕ್ರಿಯೆ ಸಂಬಂಧಿತ ಪಿಂಡ ಪ್ರಧಾನ ಕಾರ್ಯಗಳಿಗೆ ಸರ್ಕಾರದ ಮಾರ್ಗಸೂಚಿಸಿಯನ್ನು ಗಮನದಲ್ಲಿರಿಸಿಕೊಂಡು, ಸಂಬಂಧಪಟ್ಟ ದೇವಾಲಯ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡು ಗರಿಷ್ಟ 5 ಮಂದಿ ಮೀರದಂತೆ ನಡೆಸಲು ಅನುಮತಿಸಿದೆ.
ಲಾಕ್‍ಡೌನ್ ಎಫೆಕ್ಟ್- ಕೊಡಗು ಪ್ರವಾಸೋದ್ಯಮಕ್ಕೆ ಕೋಟಿ ಕೋಟಿ ನಷ್ಟhttps://t.co/o2QR9s4rvW#Lockdown #Kodagu #Tourism #KannadaNews #KodaguTourism
— PublicTV (@publictvnews) July 4, 2021
15. ಹಾಲಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಪ್ರವಾಸೋದ್ಯಮ ಚಟುವಟಿಕೆಗೆ ನಿರ್ಬಂಧವಿದ್ದು, ಹೋಂಸ್ಟೇ, ಹೊಟೇಲ್, ಲಾಡ್ಜ್, ರೆಸಾರ್ಟ್ ಗಳಲ್ಲಿ ಆತಿಥ್ಯ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ:ಕೊಡಗಿನಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಕೆ ಸುಳಿವು ನೀಡಿದ ಡಿಸಿ
16. ಪ್ರತಿ ದಿನ ರಾತ್ರಿ 9.00 ರಿಂದ ಬೆಳಿಗ್ಗೆ 6.00 ರವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ ಮತ್ತು ಶುಕ್ರವಾರ ರಾತ್ರಿ 9.00 ರಿಂದ ಸೋಮವಾರ ಬೆಳಗ್ಗೆ 6.00 ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ತರ್ತು ಅತ್ಯವಶ್ಯಕ, ವೈದ್ಯಕೀಯ, ಸರಕುಸಾಗಾಣಿಕೆ ಮತ್ತು ತುರ್ತು ಸೇವೆಗಳ ಹೊರತ್ತಾಗಿ ಇತರೇ ಯಾವುದೇ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ.
ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಕೊಡಗು ಜಿಲ್ಲಾಡಳಿತ ಅದೇಶ ಹೊರಡಿಸಿದೆ.