ಮಡಿಕೇರಿ: ಕೊಡಗು ಮೆಡಿಕಲ್ ಕಾಲೇಜಿಗೆ ಹೆಚ್ಚುವರಿ ವೈದ್ಯರನ್ನು ಕೂಡಲೇ ನೇಮಕ ಮಾಡುವಂತೆ ಕೊಡಗಿನ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಮೆಡಿಕಲ್ ಕಾಲೇಜಿಗೆ ವೈದ್ಯರ ಹುದ್ದೆ ಭರ್ತಿ ಸಂಬಂಧಿತ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿತ್ತಾದರೂ ನಿರೀಕ್ಷಿತ ರೀತಿಯಲ್ಲಿ ವೈದ್ಯರು ಬರಲಿಲ್ಲ. ಹೀಗಾಗಿ ಸರ್ಕಾರವೇ ಕೂಡಲೇ ಸೂಕ್ತ ತಜ್ಞ ವೈದ್ಯರನ್ನು ಮಡಿಕೇರಿಯಲ್ಲಿರುವ ಕೊಡಗು ಮೆಡಿಕಲ್ ಕಾಲೇಜಿಗೆ ನೇಮಿಸುವ ಮೂಲಕ ಕೊಡಗಿನ ವೈದ್ಯಕೀಯ ಕ್ಷೇತ್ರಕ್ಕೆ ನೆರವಾಗುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಸಕರು ಮನವಿ ಮಾಡಿದರು. ಈ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೋಪಯ್ಯ ತಿಳಿಸಿದ್ದಾರೆ.
ಇದೇ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ, ಮಡಿಕೇರಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಭೇಟಿ ಸಂದರ್ಭ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ನಿಗಮದ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಹಾಜರಿದ್ದು ಸಿಎಂ ಜೊತೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಅಹಂಕಾರ ಮಾಡಿದ್ರೆ ಮುದ್ದು ಮಾಡ್ತೀನಿ, ದುರಾಂಕಾರ ತೋರಿದ್ರೆ ಮದ್ದಾನೆ ಆಗ್ತೀನಿ: ಚಕ್ರವರ್ತಿ