ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

Public TV
2 Min Read
Hatras

-ಡಿಎಂ, ಎಸ್‍ಪಿ ಎಲ್ಲ ಸುಳ್ಳು ಹೇಳ್ತಿದ್ದಾರೆ

ಲಕ್ನೋ: ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ ಸಂತ್ರಸ್ತೆಯ ಕುಟುಂಬಸ್ಥರು ಮಗಳ ಅಂತಿಮ ದರ್ಶನ ಸಿಗದ ಹಿನ್ನೆಲೆ ಕಣ್ಣೀರು ಹಾಕುತ್ತಿದ್ದಾರೆ. ಸಂತ್ರಸ್ತೆಯ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಸಂತ್ರಸ್ತೆ ತಾಯಿ, ಕೊನೆ ಬಾರಿ ಮಗಳ ಮುಖ ನೋಡಲು ಸಹ ಅನುಮತಿ ನೀಡಲಿಲ್ಲ. ಡಿಎಂ, ಎಸ್‍ಪಿ ಸೇರಿದಂತೆ ಎಲ್ಲರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
GANG RAPE

ಮಗಳ ಮೂಳೆಗಳು ಮುರಿದಿರಲಿಲ್ಲ ಮತ್ತು ಆಕೆಯ ದೇಹದ ಮೇಲೆ ಯಾವುದೇ ಗಾಯದ ಗುರತು ಇರಲಿಲ್ಲ ಎಂದು ಡಿಎಂ, ಎಸ್.ಪಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಮ್ಮ ಮನೆಯ ಮಗಳಿಗೆ ಈ ರೀತಿ ಆಗಿದ್ರೆ ನೀವು ಸುಮ್ಮನೆ ಇರ್ತಿದ್ದೀರಾ? ದಲಿತ ಬಡ ಕುಟುಂಬದ ಮಗಳ ಆಗಿದಕ್ಕೆ ಪ್ರಕರಣ ಮುಚ್ಚಿ ಹಾಕ್ತೀರಾ ಎಂದು ಸಂತ್ರಸ್ತೆ ತಾಯಿ ಆಕ್ರೋಶ ಹೊರ ಹಾಕುತ್ತಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!

1 12

ಗ್ರಾಮಕ್ಕೆ ಭೇಟಿ ನೀಡಿದ ಜನಪ್ರತಿನಿಧಿಗಳು ನಾವು ಕುಟುಂಬದ ಜೊತೆಯಲ್ಲಿದ್ದೇವೆ. ಕುಟುಂಬಕ್ಕೆ ಯಾವುದೇ ಅನ್ಯಾಯವಾಗದಂತೆ ಹೋರಾಟ ನಡೆಸುತ್ತೇವೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿ ನುಣಚಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ

2 5

ಮಂಗಳವಾರ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರು ತಡರಾತ್ರಿ ಮಾಡಿದ್ದರು. ಈ ವೇಳೆ ಕುಟುಂಬಸ್ಥರು ಮನೆಯಲ್ಲಿ ಕೂಡಿ ಹಾಕಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಮತ್ತೊಮ್ಮೆ ಭಾರತದ ಮಗಳು ಭೀಕರವಾಗಿ ಹಿಂಸೆಗೊಳಗಾಗಿದ್ದಾಳೆ: ಯುವರಾಜ್

rape s

2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಮಾದರಿಯಲ್ಲಿಯೇ ಉತ್ತರಪ್ರದೇಶದ ಹುತ್ರಾಸ್ ನಲ್ಲಿ ನಡೆದಿದೆ. ಇದೇ ತಿಂಗಳ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ನಿನ್ನೆ ಮೃತಪಟ್ಟಿದ್ದರು. ಇದನ್ನೂ ಓದಿ: ಗ್ಯಾಂಗ್‍ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್‍ಗೆ ರಮ್ಯಾ ತಿರುಗೇಟು

Rape 21

ಗ್ರಾಮದಲ್ಲಿ ಯುವತಿಯ ಸಂಬಂಧಿಕರು ವಾಹನಗಳನ್ನು ನಿರ್ಬಂಧಿಸಲು ಪ್ರಯತ್ನಿಸಿದರು. ಇನ್ನೂ ಒಂದು ಹೆಜ್ಜೆ ಹೋದ ಮಹಿಳೆಯೊಬ್ಬರು ನಡುರಸ್ತೆಯಲ್ಲಿಯೇ ಕುಳಿತುಕೊಂಡು ಎದೆಗೆ ಹೊಡೆದುಕೊಂಡು ತನ್ನ ಆಕ್ರೋಶ ಹೊರಹಾಕಿದರು. ಈ ಮಹಿಳೆಯನ್ನು ಮೃತ ಯುವತಿಯ ತಾಯಿಯೆಂದು ಅಂದಾಜಿಸಲಾಗಿದೆ.

ನಸುಕಿನ ಜಾವ 2.30ರ ಸುಮಾರಿಗೆ ಯುವತಿಯ ಅಂತ್ಯಕ್ರಿಯೆ ನಡೆಸಲಾಗಿದೆ. ಈ ವೇಳೆ ಪೊಲೀಸರು ಮಾತ್ರ ಸ್ಥಳದಲ್ಲಿದ್ದರು. ಪತ್ರಕರ್ತರಿಗೂ ನಿರ್ಬಂಧ ಹೇರಿದ್ದರು. ಮೃತದೇಹ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪೊಲೀಸರು ಕ್ಯಾರೇ ಎನ್ನದೇ ತಾವೇ ಎಲ್ಲ ಕಾರ್ಯಗಳನ್ನು ಮುಗಿಸಿಬಿಟ್ಟರು ಎಂದು ಗದ್ಗದಿತರಾದರು. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಜೈಲಿಗಟ್ಟಲಾಗಿದ್ದು, ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಡೀ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ದೋಷಿಗಳನ್ನು ಗಲ್ಲಿಗೇರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ವಿಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ರಸ್ತೆಗೆ ಇಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿವೆ.

Share This Article