ತುಮಕೂರು: ಹಲವು ತಿಂಗಳಿನಿಂದ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಸ್ಥಿರವಾಗಿದ್ದ ಕೊಬ್ಬರಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕ್ವಿಂಟಲ್ ಕೊಬ್ಬರಿ ಬೆಲೆ 17 ಸಾವಿರ ರೂ. ಗಡಿ ದಾಟಿದೆ.
ಕೆಲ ರವಾನೆದಾರರ ಪ್ರಕಾರ ಹೊರ ರಾಜ್ಯದಲ್ಲಿ ಕೊಬ್ಬರಿಗೆ ಬೇಡಿಕೆ ಬಂದಿರುವ ಕಾರಣ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಅಗತ್ಯ ಪ್ರಮಾಣದಲ್ಲಿ ಪೂರೈಕೆ ಇಲ್ಲದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.
Advertisement
Advertisement
ರೈತರು ಬಹು ದಿನಗಳಿಂದ ಬೆಲೆ ಏರಿಕೆಗೆ ಕಾಯುತ್ತಿದ್ದರು. ಆದರೆ ಕೆಲ ತಿಂಗಳಿಂದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಇದೀಗ 17 ಸಾವಿರ ರೂ.ಗೆ ತಲುಪಿರುವುದು ಕೋವಿಡ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಕೊಂಚ ನೆಮ್ಮದಿ ನೀಡಿದೆ.
Advertisement
ಹೊರ ರಾಜ್ಯಗಳಲ್ಲಿ ಕೊಬ್ಬರಿಗೆ ಬೇಡಿಕೆ ಹೆಚ್ಚಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ. ಕೋವಿಡ್ ಲಾಕ್‍ಡೌನ್ ಘೊಷಣೆಯಾಗುವ ಆತಂಕದಿಂದ ಅಗತ್ಯಕ್ಕಿಂತ ಹೆಚ್ಚಿನ ಕೊಬ್ಬರಿ ಅಮದು ಮಾಡಿಕೊಳ್ಳಲಾಗುತ್ತಿದೆ. ಎಣ್ಣೆ ಕಾಳುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವುದರಿಂದ ಕೊಬ್ಬರಿ ಎಣ್ಣೆ ತಯಾರಿಕೆ, ಬಳಕೆ ಹೆಚ್ಚಿದೆ ಎನ್ನುತ್ತಾರೆ ರವಾನೆದಾರರು.
Advertisement
ಕೆಲ ತಿಂಗಳಿನಿಂದ ಎಪಿಎಂಸಿಗೆ ಉಂಡೆ ಕೊಬ್ಬರಿ ಬರುತ್ತಿರುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಫಸಲು ಕಡಿಮೆ ಆಗಿರುವ ಬಗ್ಗೆ ರೈತರು ಮಾಹಿತಿ ನೀಡುತ್ತಿದ್ದು, ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕಾರಣವಾಗಿದೆ ಎಂದಿದ್ದಾರೆ.