Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

Dakshina Kannada

ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

Public TV
Last updated: January 20, 2021 2:50 pm
Public TV
Share
2 Min Read
hundi koragajja temple ullal
SHARE

– ಕೊರಗಜ್ಜನೇ‌ ಶಿಕ್ಷೆ ನೀಡಲಿ‌ ಎಂದು ಪ್ರಾರ್ಥಿಸಿದ ಭಕ್ತರು

ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ.

ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ‌ ಸಾರ್ವಜನಿಕ‌ ಶ್ರೀ‌ಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ‌ ಹುಂಡಿಯಲ್ಲಿ‌ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ‌ ಹುಂಡಿಯ ಹಣ ಎಣಿಕೆ ಕಾರ್ಯ ನಡೆಯುತ್ತದೆ. ಈ ಬಾರಿ ಮಾತ್ರ ತಡವಾಗಿ ಕಾಣಿಕೆ‌ಹುಂಡಿಯನ್ನು ಎಣಿಕೆಗೆ ತೆಗೆಯಲಾಗಿದೆ.

ULLALA KORGAJJA TEMPLE HUNDI 2

ಎಣಿಕೆಯ ವೇಳೆ ಕಾಂಡೋಮ್‌ಗಳು ಹಾಗೂ ಸಿಎಂ ಬಿಬಿಸ್ ಯಡಿಯೂರಪ್ಪ‌ ಸೇರಿದಂತೆ ಬಿಜೆಪಿ ನಾಯಕರ ಭಾವ ಚಿತ್ರಗಳನ್ನು ವಿರೋಪಗೊಳಿಸಿ,ಅವಹೇಳನಕಾರಿ ಬರಹಗಳನ್ನು ಬರೆದು ಕಾಣಿಕೆ‌ ಹುಂಡಿಗೆ ಹಾಕಿದ್ದಾರೆ. ಬಳಕೆ ಮಾಡಿದ ಎರಡು ಕಾಂಡೋಮ್‌ ಹಾಕಿದ್ದ ಕಿಡಿಗೇಡಿಗಳು ಅದರ ಜೊತೆಗೆ ಬೆಂಗಳೂರಿನ ಕೆ.ಆರ್‌. ಐಡಿಯಲ್‌ ನಿಗಮಾಧ್ಯಕ್ಷರಾದ ಎಂ ರುದ್ರೇಶ್‌ ಅವರಿಗೆ ಶುಭಕೋರಿದ ಒಂದು ಪೋಸ್ಟರ್ ಹಾಕಿದ್ದಾರೆ. ಪೋಸ್ಟರ್‌ನಲ್ಲಿರುವ ಸಿಎಂ ಬಿಎಸ್‌ವೈ, ಅವರ ಪುತ್ರ ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಫೋಟೋವನ್ನು ವಿರೂಪಗೊಳಿಸಲಾಗಿದೆ.

ಇದೇ ಪೋಸ್ಟರ್ ನಲ್ಲಿ ”ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು, ದೇವ ಲೋಕದಿಂದ ಹೊರ ಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು, ವಿಗ್ರಹಗಳ ಮೂಲಕ ಭೂ ಲೋಕದ ಜನರನ್ನು ಭ್ರಷ್ಟರನ್ನಾಗಿಸಿ, ನಕಲಿ ದೇವರಾಗಿ ಅನಾಧಿಕಾಲದಿಂದ ಮೆರೆಯಲ್ಪಡುತ್ತಿದೆ. ಎಚ್ಚರ, ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ಬಾಚಿ ತಿಂದು ತೇಗುವ ಈ ಅಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹಿಡಿದು ಕೊಲ್ಲಬೇಕಾಗಿದ್ದು, ಜನರು ಸಿದ್ದರಾಗಬೇಕು” ಎಂದು ಪ್ರಚೋದನಕಾರಿಯಾಗಿ ಬರೆಯಲಾಗಿದೆ.

ULLALA KORGAJJA TEMPLE HUNDI 5

ಕಿಡಿಗೇಡಿಗಳ ಈ ಕೃತ್ಯದ ವಿರುದ್ಧ ಕೊರಗಜ್ಜ ಸೇವಾ ಸಮಿತಿಯವರು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕೊರಗಜ್ಜ, ಗುಳಿಗಜ್ಜನ ಸನ್ನಿಧಿಯಲ್ಲಿ ನೂರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ಈ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ದ ಕ್ಷೇತ್ರದ ಕಾರ್ಣಿಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜ ಶಿಕ್ಷೆಸಬೇಕು ಎಂದು ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.

ಕೆಲ ದಿನಗಳ‌ ಹಿಂದೆ ಮಂಗಳೂರಿನ ಕೊಟ್ಟಾರದ ಬಬ್ಬುಸ್ವಾಮಿ ಹಾಗೂ ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲಿ ಕೂಡಾ ಇದೇ ರೀತಿಯ ಅವಹೇಳನಕಾರಿ ಬರಹದ ಪತ್ರಗಳು ಪತ್ತೆಯಾಗಿದ್ದು, ಅದೇ ತಂಡ ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ‌ ಬೀಸಿದ್ದಾರೆ.

ULLALA KORGAJJA TEMPLE HUNDI 1

TAGGED:CondomHundiKoragajja TempleMangaluruUllalಉಳ್ಳಾಲಕಾಂಡೋಮ್ಕೊರಗಜ್ಜಗುಳಿಗಜ್ಜಮಂಗಳೂರು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
3 minutes ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
6 minutes ago
Nagpur Explosives Manufacturing Company blast
Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
9 minutes ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
21 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
48 minutes ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?