– ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು: ಕೊರೊನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದು, ಸಂಸದರ ನಿಧನಕ್ಕೆ ಪ್ರಧಾನಿಗಳು ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಬಿಜೆಪಿ ದೊಡ್ಡ ಆಘಾತವಾಗಿದೆ. ಕೆಲ ದಿನಗಳ ಹಿಂದೆ ರಾಜ್ಯಸಭಾ ಸಂಸದ ಅಶೋಕ್ ಗಸ್ತಿ ಸಹ ಕೊರೊನಾಗೆ ಬಲಿಯಾಗಿದ್ದರು.
Shri Suresh Angadi was an exceptional Karyakarta, who worked hard to make the Party strong in Karnataka. He was a dedicated MP and effective Minister, admired across the spectrum. His demise is saddening. My thoughts are with his family and friends in this sad hour. Om Shanti. pic.twitter.com/2QDHQe0Pmj
— Narendra Modi (@narendramodi) September 23, 2020
Advertisement
ರಾಜ್ಯ ಬಿಜೆಪಿಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಸಚಿವರು ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಹೋದ್ಯೋಗಿ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ರು. ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದರು. ರಾಜ್ಯಕ್ಕೆ ಒಳ್ಳೆಯ ಕೆಲಸಗಳನ್ನ ಮಾಡಬೇಕೆಂಬ ತುಡಿತದಲ್ಲಿದ್ದರು. ಆದ್ರೆ ಇಂದು ನಮ್ಮೊಂದಿಗೆ ಇಲ್ಲ ಎಂದು ಭಾವುಕರಾದರು.
Advertisement
ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.. pic.twitter.com/pnso6ED4lv
— B.S.Yediyurappa (@BSYBJP) September 23, 2020
Advertisement
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ದಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು,
ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/Q4VQWBoKxp
— Siddaramaiah (@siddaramaiah) September 23, 2020
Advertisement
ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ, ಶ್ರೀರಾಮುಲು, ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಂಗಡಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.