ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ.
59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.
Advertisement
Advertisement
ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಹೀಗಾಗಿ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಬಾಗಲಕೋಟೆ ಡಿಹೆಚ್‍ಒ ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ.
Advertisement
ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,190ಕ್ಕೇರಿಕೆಯಾಗಿದ್ದು, ಭಾನುವಾರ ಒಂದೇ ದಿನ 16 ಮಂದಿ ಸಾವನ್ನಪ್ಪಿದ್ದಾರೆ. 220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 5,472 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಐಸಿಯುವಲ್ಲಿ 243 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.