ಬೀದರ್: ಕೊರೊನಾ ಎರಡನೇಯ ಅಲೆಯ ಅಬ್ಬರಕ್ಕೆ ಗಡಿ ಜಿಲ್ಲೆ ಬೀದರ್ ಅಕ್ಷರಶಃ ತತ್ತರಿಸಿ ಹೋಗುತ್ತಿದ್ದು,ಪ್ರತಿದಿನ 400 ಪಾಸಿಟಿವ್ ಕೇಸ್‍ಗಳು ಪತ್ತೆಯಾಗುತ್ತಿವೆ. ಕೊರೊನಾಗೆ ಭಯಗೊಂಡ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಹೇರಿಕೊಂಡಿದ್ದಾರೆ.
Advertisement
ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಕೊರೊನಾ ಮಹಾಮಾರಿಗೆ ಬ್ರೇಕ್ ಹಾಕಲು ಈ ನಿರ್ಧಾರ ಮಾಡಿದ್ದಾರೆ. ಗ್ರಾಮದಲ್ಲಿ ತಮಟೆ ಬಾರಿಸುವ ಮುಖಾಂತರ ಗ್ರಾಮಸ್ಥರು ಸೆಲ್ಫ್ ಲಾಕ್ ಡೌನ್ ಹೇರಿಕೊಂಡಿದ್ದಾರೆ. ಬೆಳಗ್ಗೆ ಹಾಗೂ ಸಂಜೆ 6 ರಿಂದ 8 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿಗಳು ಓಪನ್ ಮಾಡಲು ನಿರ್ಧಾರ ಮಾಡಿದ್ದಾರೆ. ಯಾರು ಮಾಸ್ಕ್ ಇಲ್ಲದೆ ಓಡುವಂತಿಲ್ಲ ಎಂದು ಕೊವೀಡ್ ನಿಯಮಗಳನ್ನು ಪಾಲಿಸುವಂತೆ ಕೂಡಾ ತಮಟೆ ಬಾರಿಸುವ ಮೂಲಕ ತಿಳಿಸಿದ್ದಾರೆ.
Advertisement
Advertisement
ಒಂದೇ ವಾರದಲ್ಲಿ 7ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿದ್ದು, ಓರ್ವ ಕೊರೊನಾಗೆ ಬಲಿಯಾಗಿದ್ದಾನೆ. ಹೀಗಾಗಿ ಭಯಗೊಂಡ ಬೀದರ್ ತಾಲೂಕಿನ ಬಾವಗಿ ಗ್ರಾಮಸ್ಥರು ಸೆಲ್ಫ್ ಲಾಕ್ ಡೌನ್ ಹೇರಿಕೊಂಡಿದ್ದಾರೆ. ಗ್ರಾಮದಲ್ಲಿ ಕೊರೊನಾ ಪತ್ತೆಯಾಗುತ್ತಿರುವ ಕಾರಣ ಭಯಗೊಂಡು ಸೆಲ್ಫ್ ಲಾಕ್ ಡೌನ್ ನಿರ್ಧಾರ ಮಾಡಿದ್ದೇವೆ ಎಂದು ಬಾವಗಿ ಗ್ರಾಮಸ್ಥರು ಹೇಳಿದ್ದಾರೆ.
Advertisement