ಬೆಂಗಳೂರು: ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾಗೆ ಬಲಿಯಾಗಿದ್ದಾರೆ.
10 ದಿನಗಳ ಹಿಂದೆ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Advertisement
ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ ಮಾಧ್ಯಮ ವಲಯದಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅತಿಥಿಯಾಗಿ ಮತ್ತು ಪತ್ರಿಕೆಗಳಲ್ಲಿ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅಂಕಣಗಳನ್ನು ಮಹಾದೇವ ಪ್ರಕಾಶ್ ಬರೆಯುತ್ತಿದ್ದರು.
Advertisement
ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ.
— B.S.Yediyurappa (@BSYBJP) May 14, 2021
Advertisement