ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ತಂದೆ ಅಥವಾ ತಾಯಿ ಕಳೆದುಕೊಂಡು ಅನಾಥರಾಗಿರುವ ಕರ್ನಾಟಕ ರಾಜ್ಯದ ಮಕ್ಕಳಿಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮ ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವುದಾಗಿ ಪ್ರಕಟಣೆ ಹೊರಡಿಸಿದೆ.
1 ನೇ ತರಗತಿಯಿಂದ 12 ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಹಾಗೂ ತಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗದಿದ್ದಲ್ಲಿ ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಅನಾಥ ವಿದ್ಯಾರ್ಥಿಗಳಿಗೆ ವಾರ್ಷಿಕ 20 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುವುದು.
Advertisement
Advertisement
ಅನಾಥರಾದ ಮಕ್ಕಳು ಸತ್ಯಸಾಯಿ ಗುರುಕುಲದಲ್ಲಿ ಸೇರಲು ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ನೊಂದಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಿಗೆ ಇಂಟರ್ ವ್ಯೂ ಮಾಡಿ ತದನಂತರ ದಾಖಲಾತಿ ಮಾಡಿಕೊಳ್ಳಲಾಗುವುದು. ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಯಾವುದಾದರೊಂದು ಶಾಲೆಯಲ್ಲಿ 6 ರಿಂದ 12ನೇ ತರಗತಿಯವರೆಗೆ ಊಟ ವಸತಿ ಸಹಿತ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು. ಇದನ್ನು ಓದಿ: ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಐಡಿಯಾಗೆ ಜನರಿಂದ ಮೆಚ್ಚುಗೆ
Advertisement
ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಶಾಲೆಗಳು ಕರ್ನಾಟಕ ರಾಜ್ಯಾದ್ಯಂತ ಅನೇಕ ಶಾಖೆಗಳನ್ನು ಹೊಂದಿವೆ. ಈ ಪೈಕಿ ಯಾವುದಾದರೊಂದು ಶಾಲೆಯಲ್ಲಿ ರಾಷ್ಟ್ರೀಯ ಮುಕ್ತ ಶಿಕ್ಷಣ ಯೋಜನೆಯಡಿಯಲ್ಲಿ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳು ತಿಳಿಸಿದ್ದು, ಶ್ರೀ ಸತ್ಯಸಾಯಿ ಲೋಕಸೇವಾ ಗುರುಕುಲ ಶೈಕ್ಷಣಿಕ ಸಂಸ್ಥೆಗಳ ಸಮೂಹದ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಹರಲ್ಲದ ಮತ್ತು ಸದರಿ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯಲಿಚ್ಚಿಸದ ವಿದ್ಯಾರ್ಥಿಗಳಿಗೂ ಸಹ ಅವರುಗಳು ಇತರ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗವನ್ನು ಮುಂದುವರೆಸಲು ವಾರ್ಷಿಕ ರೂ 20,000 ವಿದ್ಯಾರ್ಥಿ ವೇತನವನ್ನು ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನೀಡಲಾಗುವುದು.
Advertisement
ಕೋವಿಡ್ ಪಿಡುಗಿನಿಂದ ಪೋಷಕರನ್ನು ಕಳೆದುಕೊಂಡು ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಶಿಷ್ಯ ವೇತನಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು. ಸಂಸ್ಥೆಯ ಅಧಿಕೃತ ವೆಬ್ ಸೈಟ್‍ನಲ್ಲಿ <<Student Sahay Link >> ಮೂಲಕ ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ನ ಪ್ರತಿನಿಧಿಯವರು ಅರ್ಜಿದಾರರನ್ನು ಸಂಪರ್ಕಿಸುವರು. ಇದಲ್ಲದೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಟ್ರಸ್ಟ್ ವತಿಯಿಂದಲೂ ಸಹ ಈ ರೀತಿಯ ನೆರವಿನ ಕಾರ್ಯ ಕೈಗೊಂಡಿದ್ದು, ಅನಾಥ ಮಕ್ಕಳಿಗೆ ಉಚಿತ ಊಟ ವಸತಿ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಒದಗಿಸಲಾಗುತ್ತಿದೆ. ಇದನ್ನು ಓದಿ: ಮಾಸ್ಕ್ ವಿಚಾರಕ್ಕೆ ಕಿರಿಕ್ – ದೊಣ್ಣೆಯಿಂದ ಮಹಿಳೆಗೆ ಬಡಿದ ಯುವತಿ
ಈ ರೀತಿಯ ನೆರವಿಗೆ ಜಿಲ್ಲಾಡಳಿತವನ್ನು ಅಥವಾ ಆದಿಚುಂಚನಗಿರಿ ಮಠದ ಶಾಖೆಯನ್ನು ಖುದ್ದಾಗಿ ದೂರವಾಣಿ ಸಂಪರ್ಕ ಮುಖಾಂತರ ಸಂಪರ್ಕಿಸಿ ಸೌಲಭ್ಯಗಳನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ಅಂತ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಸಂಸ್ಥೆಗಳ ಸಾಮಾಜಿಕ ಕಳಿಕಳಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.