ಮೈಸೂರು: ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ 72 ವರ್ಷದ ವೃದ್ಧ ಇಂದು ಸಾವನ್ನಪ್ಪಿದ್ದಾರೆ.
ಮೈಸೂರಿನ ನಜರ್ಬಾದ್ ನಿವಾಸಿಯಾಗಿದ್ದ 72 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು. 17 ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದರು. ಆದ್ರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾರೆ.
Advertisement
Advertisement
ಮೃತ ವೃದ್ಧನ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೈಸೂರಿನ 90 ಕೊರೊನಾ ಸೋಂಕಿತರಲ್ಲಿ 88 ಮಂದಿ ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.