ಚಾಮರಾಜನಗರ: ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನೈಟ್ ಕರ್ಫ್ಯೂ ಹಿನ್ನೆಲೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದನ್ನು ಕಡ್ಡಾಯವಾಗಿ ಪಾಲಿಸಲು ಭಕ್ತರಿಗೆ ಮನವಿ ಮಾಡಲಾಗಿದೆ. 24-12-2020 ರಿಂದ (ರಾತ್ರಿ 11 ಗಂಟೆಯಿಂದ) 02-01-2021ರ ಬೆಳಗ್ಗೆ 5-00ರವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಿರುವುದರ ಪ್ರಯುಕ್ತ, ದೇವಾಲಯಕ್ಕೆ ಬರುವ ಎಲ್ಲ ಭಕ್ತಾದಿಗಳು ಹೊಸ ಸೂಚನೆಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.
Advertisement
1. ಕೊಠಡಿಗಳನ್ನ ಆನ್‍ಲೈನ್ ನಲ್ಲಿ ಕಾಯ್ದಿರಿಸಿರುವ ಭಕ್ತಾದಿಗಳು ರಾತ್ರಿ 10.30 ರೊಳಗೆ ಮಹದೇಶ್ವರ ಬೆಟ್ಟಕ್ಕೆ ಬಂದು ಮಾಹಿತಿ ಕೇಂದ್ರದಲ್ಲಿ ನೋಂದಾಯಿಸಿ ಸಂಬಂಧಪಟ್ಟ ವಸತಿ ಗೃಹದೊಳಗೆ ವಾಸ್ತವ್ಯಕ್ಕೆ 10.45ರೊಳಗೆ ತಲುಪತಕ್ಕದ್ದು.
2. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮಾಹಿತಿ ಕೇಂದ್ರ ಮುಚ್ಚಲಾಗುವುದು ಹಾಗೂ ಯಾವುದೇ ಕೊಠಡಿಗಳನ್ನು ಈ ಸಮಯದಲ್ಲಿ ವಿತರಿಸಲಾಗುವುದಿಲ್ಲ.
3. ರಾತ್ರಿ 11 ರಿಂದ ಬೆಳಗ್ಗೆ 5ರವರೆಗೆ ಸಂಪೂರ್ಣ ಲಾಕ್‍ಔಟ್ ಪಾಲಿಸಲಾಗುವುದು. ಯಾವುದೇ ಸಂಚಾರಕ್ಕೆ ಅವಕಾಶವಿರುವುದಿಲ್ಲ.
4. ದೇವಸ್ಥಾನ, ಲಾಡು ಕೌಂಟರ್ ಹಾಗೂ ದಾಸೋಹಕ್ಕೆ ಬರುವವರು ರಾತ್ರಿ 10ರ ಒಳಗಾಗಿ ದರ್ಶನ ಪಡೆಯುವುದು, ದಾಸೋಹ ಸ್ವೀಕರಿಸುವುದು ಹಾಗೂ ಲಾಡು ಖರೀದಿಸುವುದು. ರಾತ್ರಿ 10ರ ನಂತರ ಈ ಮೂರೂ ಸೇವೆಗಳು ಲಭ್ಯವಿರುವುದಿಲ್ಲ.
Advertisement
Advertisement
5. ಕೊಠಡಿ ಕಾಯ್ದಿರಿಸಿರುವವರು ನಂತರ ಬಂದಲ್ಲಿ ರೀಫಂಡ್ ನೀಡಲಾಗುವುದಿಲ್ಲ. ಈ ಬಗ್ಗೆ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
6. ಬೆಳಗ್ಗೆ 4ಕ್ಕೆ ಪ್ರಾರಂಭವಾಗುವ ಅಭಿಷೇಕಕ್ಕೆ ಭಕ್ತಾದಿಗಳಿಗೆ ಪ್ರವೇಶವಿರುವುದಿಲ್ಲ. ಆದರೆ ಸಾಂಪ್ರದಾಯಿಕವಾಗಿ ಅಭಿಷೇಕವನ್ನು ಬೇಡಗಂಪಣರು ಹಾಗೂ ದೇವಾಲಯದ ಒಳಾವರಣದ ಸಿಬ್ಬಂದಿ ನಡೆಸಲಿರುವರು. ಬೆಳಗ್ಗೆ 5ರ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.
7. ದೇವಾಲಯದ ಆವರಣದಲ್ಲಿ ವಸತಿ ಗೃಹಗಳು, ಕಾಟೇಜುಗಳು ಹಾಗೂ ಡಾರ್ಮಿಟರಿ ಹೊರತುಪಡಿಸಿ, ಬೇರೆ ಯಾವುದೇ ತೆರೆದ ಜಾಗಗಳು ಹಾಗೂ ದೇವಾಲಯದ ಪಕ್ಕದಲ್ಲಿರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆಯ ಷೆಡ್‍ನಲ್ಲಿ ಉಳಿದುಕೊಳ್ಳಬಾರದಾಗಿ ಮನವಿ.
Advertisement
8. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಶ್ರೀ ಕ್ಷೇತ್ರಕ್ಕೆ ಬರುವುದು ಹಾಗೂ ಶ್ರೀ ಕ್ಷೇತ್ರದಿಂದ ತೆರಳುವವರೆಗೆ ಧರಿಸಿರಲು ಕೋರಿದೆ. ವೈಯುಕ್ತಿಕವಾಗಿ ಸ್ಯಾನಿಟೈಸರ್ ಇಟ್ಟುಕೊಳ್ಳಲು ಹಾಗೂ ಆಗ್ಗಾಗ್ಗೆ ಉಪಯೋಗಿಸಲು ಕೋರಿದೆ.
9. ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವುದು. ವಿಶೇಷವಾಗಿ ದೇವಸ್ಥಾನದ ಕ್ಯೂ ಲೈನಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡೇ ದರ್ಶನ ಮಾಡುವುದು.
10. ದಾಸೋಹದಲ್ಲಿ ಕಡ್ಡಾಯವಾಗಿ ಕ್ಯೂ ಲೈನಿನಲ್ಲಿ ಹಾಗೂ ಕುಳಿತುಕೊಳ್ಳುವ ಮೇಜಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
11. ಯಾವುದೇ ಸಂದೇಹವಿದ್ದಲ್ಲಿ ಮಾಹಿತಿ ಕೇಂದ್ರದಲ್ಲಿ ನಿರ್ವಹಣೆಯಲ್ಲಿರುವ ಸಹಾಯವಾಣಿ ನಂಬರಿಗೆ 1860 425 4350 ಗೆ ಕರೆ ಮಾಡುವುದು.