ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ.
ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. ಇದರಿಂದ ಆ ಅಪಾರ್ಟ್‍ಮೆಂಟ್‍ನಲ್ಲಿ ವಾಸ ಮಾಡುತ್ತಿರುವ ನಿವಾಸಿಗಳೇ ಸೆಕ್ಯೂರಿಟಿ ಗಾರ್ಡ್ ಕೆಲಸವನ್ನು ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹೀಗಾಗಿ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ.
Advertisement
Advertisement
ನಟ ಶ್ರೀನಾಥ್ ವಸಿಷ್ಠ ಸಹ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ ಕಾಲ ಕೆಲಸ ಮಾಡಿದ್ದು, ತಮ್ಮ ಅನುಭವವನ್ನು ಫೇಸ್‍ಬುಕ್ ಪೇಜಿನಲ್ಲಿ ಹಂಚಿಕೊಂಡಿದ್ದಾರೆ. ” ನಾನು ಈ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದೇನೆ. ನಮ್ಮ ಅಪಾರ್ಟ್‍ಮೆಂಟ್‍ನ ಒಬ್ಬ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇನ್ನುಳಿದ ಇಬ್ಬರು ಸೆಕ್ಯೂರಿಟಿ ಸಿಬ್ಬಂದಿ ಕ್ವಾರಂಟೈನ್ ಆಗಿದ್ದಾರೆ” ಎಂದು ತಿಳಿಸಿದ್ದಾರೆ.
Advertisement
Advertisement
“ಈ ವೇಳೆ ಅಪಾರ್ಟ್‍ಮೆಂಟ್ ಕಮಿಟಿ ಇಲ್ಲಿ ವಾಸ ಮಾಡುವ ನಿವಾಸಿಗಳೇ 10 ದಿನಗಳ ಕಾಲ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಳ್ಳುವಂತೆ ಮನವಿ ಮಾಡಿತ್ತು. ಹೀಗಾಗಿ ನಾನು ಇಂದು (ಸೋಮವಾರ) ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಗೇಟ್‍ನಲ್ಲಿ ಕುಳಿತು ಸೆಕ್ಯೂರಿಟಿ ಗಾರ್ಡ್ ಕಾರ್ಯ ಮಾಡಿದ್ದೇನೆ. ಭಾನುವಾರ ರಾತ್ರಿ ನನ್ನ ಪುತ್ರ ಋತ್ವಿಕ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿದ್ದಾರೆ. ಈಗ ನಾನು ಈ ಕೆಲಸವನ್ನು ಮಾಡಿದ್ದೇನೆ. ಇದೊಂದು ಹೊಸ ಅನುಭವ” ಎಂದು ಶ್ರೀನಾಥ್ ವಸಿಷ್ಠ ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಸೋಮವಾರ 2,738 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸಿಲಿಕಾನ್ ಸಿಟಿಯೊಳಗೆ ಶರವೇಗದಲ್ಲಿ ಸಾಗುತ್ತಿರುವ ಕೊರೊನಾ 1,315 ಜನರಿಗೆ ತಗುಲಿದೆ. ಒಂದೇ ದಿನ 73 ಸಾವಾಗಿದ್ದು, ಬೆಂಗಳೂರಿನಲ್ಲಿ 47 ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ.